ಗುಲ್ಬರ್ಗಾ

ಅಕ್ರಮ ಮದ್ಯ ಮಾರಾಟ ತಡೆಗೆ ಮನವಿ

Published On :

ಯಾದಗಿರಿ: ಜಿಲ್ಲಾದ್ಯಂತ ಕಳ್ಳಬಟ್ಟಿ ಸಾರಾಯಿ ಹಾಗೂ ಸೇಂದಿ ಅಕ್ರಮ ಮಾರಾಟ ಜಾಲ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವಂತೆ ಆಗ್ರಹಿಸಿ ಜಿಲ್ಲಾ ಟೋಕರಿ ಕೋಲಿ ಕಬ್ಬಲಿಗ ಸಮಾಜ ಜಿಲ್ಲಾಧಿಕಾರಿಗಳ ಮುಖಾಂತರ ಅಬಕಾರಿ ಸಚಿವ ಸತೀಶ ಜಾರಕಿಹೊಳಿಗೆ ಮಂಗಳವಾರ ಮನವಿ ಸಲ್ಲಿಸಿದರು. ಜಿಲ್ಲಾ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಪಿಡಿಒಗಳಿಗೆ ಸೂಚನೆ ನೀಡಬೇಕು. ಅಕ್ರಮ ತಡೆಯಲು ಅಬಕಾರಿ ಇಲಾಖೆ ಒಂದರಿಂದ ಸಾಧ್ಯವಿಲ್ಲ. ಸಕ್ರಿಯವಾಗಿ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಒಳಪಟ್ಟಂತೆ ಆಯಾ ಅಧಿಕಾರಿಗಳು ಜವಾಬ್ದಾರಿ ಸ್ಥಾನದಲ್ಲಿ ಇರುವವರ ಹೊಣೆ ಮಾಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಬೇಕು ಎಂದು ಸಮಾಜದ ಅಧ್ಯಕ್ಷ ಉಮೇಶ ಮುದ್ನಾಳ ಆಗ್ರಹಿಸಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮೀಣ ಭಾಗದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದನ್ನು ನಿರ್ಲಕ್ಷಿಸದೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಕಾನೂನಿನ ಸೂಕ್ತ ಕ್ರಮದಿಂದ ತಡೆಗಟ್ಟಬಹುದೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಿದ್ದಪ್ಪ ನಾಲ್ವಡಗಿ, ರಾಜಶೇಖರ್ ಎನ್., ಶಿವಶರಣಪ್ಪ ಕುಂಬಾರ, ಸಾಬರೆಡ್ಡಿ ಅನಪೂರ್, ಮಲ್ಲಿಕಾರ್ಜುನ ಇಟೇಕರ, ಲೋಹಿತ್ ನಾಟೇಕರ್, ರಾಮು ಗಣಪೂರ, ಬಸ್ಸಪ್ಪ ಕಾವಲಿ ಆಶಾಪುರ್, ಮಹಾದೇವಪ್ಪ ನಾಲ್ವಡಗಿ, ಮಲ್ಲಪ್ಪ ನಾಲ್ವಡಗಿ, ಭೀಮರಾಯ ನಾಲ್ವಡಗಿ, ವೆಂಕಟೇಶ ಬಂದಳ್ಳಿ, ಯಂಕಪ್ಪ ಬಂದಳ್ಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.