ಗುಲ್ಬರ್ಗಾ

ರೈಲು ಪ್ರಯಾಣ ದರ ಏರಿಕೆ ವಿರೋಧ ಸಿಪಿಎಂ, ಜೆಡಿಎಸ್ ಪ್ರತಿಭಟನೆ

Published On :

ಶಹಾಬಾದ್: ಕೇಂದ್ರ ಸರ್ಕಾರ ದಿಢೀರನೇ ರೈಲು ಪ್ರಯಾಣ ದರ ಹಾಗೂ ಗೂಡ್ಸ್ ಸಾಗಣೆ ದರವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್‌ವಾದಿ) ಚಿತ್ತಾಪುರ ತಾಲೂಕು ಘಟಕ ಹಾಗೂ ಜೆಡಿಎಸ್ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಬಸ್ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಜನಸಾಮಾನ್ಯರು ಬೆಲೆ ಏರಿಕೆಯ ಪ್ರಹಾರದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ಜನಸಾಮಾನ್ಯರಿಗೆ ಹೊರೆಯಾಗಿರುವಂಥ ರೈಲು ಪ್ರಯಾಣ ದರ, ಡಿಸೇಲ್ ಹಾಗೂ ಎಲ್‌ಪಿಜಿ ದರದ ಏರಿಕೆಯನ್ನು ತಕ್ಷಣ ತಡೆಗಟ್ಟಬೇಕೆಂದು ಆಗ್ರಹಿಸಿದರು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಿಪಿಐ(ಎಂ) ತಾಲೂಕು ಮುಖಂಡ ಅಶೋಕ ಮ್ಯಾಗೇರಿ, ಚಂದು ಜಾಧವ, ಜೆಡಿಎಸ್ ನಗರ ಅಧ್ಯಕ್ಷ ಸೋಮಶೇಖರ ನಂದಿಧ್ವಜ, ಲೋಹಿತ್ ಕಟ್ಟಿ, ರಾಜ ಮಹ್ಮದ ರಾಜಾ, ರಾಜು ರಾಠೋಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.