ಗುಲ್ಬರ್ಗಾ

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಇಂದು

Published On :

ಗುಲ್ಬರ್ಗ: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಗುಲ್ಬರ್ಗ ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಮಲಾಪುರ ಗ್ರಾ.ಪಂ ಮತ್ತು ಮೈರಾಡ ಗುಲ್ಬರ್ಗ ಸಂಯುಕ್ತಾಶ್ರಯದಲ್ಲಿ ಜೂ. 26ರಂದು ಬೆಳಗ್ಗೆ 10.30 ಗಂಟೆಗೆ ಕಮಲಾಪುರ ರೇವಣ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಗುವುದು. ಜಿ.ಪಂ ಅಧ್ಯಕ್ಷೆ ಕಸ್ತೂರಿಬಾಯಿ ಗೌಡತಿ ಎಸ್.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು. ಜಿ.ಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಎಸ್.ಮಾಲಿಪಾಟೀಲ, ತಾ.ಪಂ ಸದಸ್ಯ ಅಮೃತರಾವ ಗೌರೆ,  ಗ್ರಾ.ಪಂ ಉಪಾಧ್ಯಕ್ಷೆ ಸುಮನ ನರಸಿಂಗರಾವ ಕದಮ ಅತಿಥಿಗಳಾಗಿ ಆಗಮಿಸುವರು. ಗ್ರಾ.ಪಂ ಅಧ್ಯಕ್ಷೆ ಮಹಾದೇವಿ ಎಸ್. ಮಂಠಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಆಸ್ಪತ್ರೆಯ ಕ್ಲಿನಿಕಲ್ ಸೈಕಾಲಾಜಿಸ್ ಡಾ. ರೇಣುಕಾ ವಿಶೇಷ ಉಪನ್ಯಾಸ ನೀಡುವರು. ಮಾದಕ ವಸ್ತು ವಿರೋಧಿ ದಿನಾಚರಣೆ ಜಾಥಾವನ್ನು ಬೆಳಗ್ಗೆ 9 ಗಂಟೆಗೆ ಹಮ್ಮಿಕೊಂಡಿದ್ದು, ತಾ.ಪಂ ಸದಸ್ಯ ಅಮೃತರಾವ ಗೌರೆ ಜಾಥಾ ಉದ್ಘಾಟಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.