'ಶಿಕ್ಷಕರ ಕೊರತೆ ನೀಗಿಸಿ'
ಜೇವರ್ಗಿ: ತಾಲೂಕಿನ ವರ್ಚನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 7 ತರಗತಿಗಳಿದ್ದು, ಕೇವಲ ಮೂವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ತಕ್ಷಣ ಇನ್ನೂ ಮೂವರು ಶಿಕ್ಷಕರನ್ನು ನೇಮಕ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವರ್ಚನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯವರೆಗೆ ಒಟ್ಟು 150 ಜನ ಮಕ್ಕಳ ದಾಖಲಾತಿಯಿದೆ. 140 ಮಕ್ಕಳ ಹಾಜರಾತಿಯಿದೆ. ಕೇವಲ ಮೂವರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಶಾಲೆಗೆ ತಕ್ಷಣ ಇನ್ನೂ ಮೂವರು ಶಿಕ್ಷಕರನ್ನು ನಿಯೋಜಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಕ್ಷಣ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಮನವಿ ಪತ್ರದ ಮೂಲಕ ಎಚ್ಚರಿಸಿದ್ದಾರೆ. ಕರವೇ ತಾಲೂಕು ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ ಹಾಲಗಡ್ಲ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ತಮ್ಮಣ ಪೂಜಾರಿ, ಭೀಮಸಿಂಗ್, ಸಾಯಬಣ್ಣ ಕವಾಲ್ದಾರ್, ಸಂತೋಷ ಪೂಜಾರಿ, ಈರಣ್ಣಗೌಡ ಗುಳ್ಯಾಳ ಹಾಗೂ ಗ್ರಾಮಸ್ಥರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

