ಗುಲ್ಬರ್ಗಾ

ಹಿರಿಯ ನಾಗರೀಕರಿಗೆ ಪ್ರಶಸ್ತಿ- ಅರ್ಜಿ ಕರೆ

Published On :

ರಾಯಚೂರು: ಹಿರಿಯ ನಾಗರೀಕರಿಗೆ 2014ನೇ ಸಾಲಿನ ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ, ಸಬಲೀಕರಣಾಧಿಕಾರಿಗಳು ರಾಯಚೂರು ಅವರಿಂದ ಪಡೆದು ಭರ್ತಿ ಮಾಡಿ ಜು.21ರೊಳಗೆ ಇಲಾಖೆಗೆ ಸಲ್ಲಿಸುವಂತೆ  ಹಾಗೂ ಹೆಚ್ಚಿನ ಮಾಹಿತಿಗೆ ಇಲಾಖೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ: ರಾಯಚೂರು ತಾಲೂಕಿನಲ್ಲಿ ಖಾಲಿಯಿರುವ 4 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 9 ಸಹಾಯಕಿಯರ ಹುದ್ದೆ ಮೂಲಕ ಈಗಾಗಲೇ ತಾತ್ಕಾಲಿಕವಾಗಿ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಿದ್ದು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಈಗಾಗಲೇ ಅರ್ಜಿಗಳನ್ನು ಸಲ್ಲಿಸಿದವರು ಆಕ್ಷೇಪಣೆಗಳೇನಾದರೂ ಇದ್ದಲ್ಲಿ  ಜು. 5ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ಆನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲವೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.