ಗುಲ್ಬರ್ಗಾ

ಜಗಜೀವನರಾಂ ಪ್ರತಿಮೆ ಸ್ಥಾಪನೆಗಾಗಿ ಧರಣಿ

Published On :

ಶಹಾಬಾದ್: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಶೇ. 22.75 ಅನುದಾನದಲ್ಲಿ ಡಾ.ಬಾಬು ಜಗಜೀವನರಾಂ ಅವರ ಪ್ರತಿಮೆ ಸ್ಥಾಪನೆ ಮಾಡಲು, ಸ್ಥಳೀಯ ಗ್ರಾಮಲೇಖ ಪಾಲಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ವತಿಯಿಂದ ಡಾ. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಧರಣಿ ನಡೆಸಲಾಯಿತು. ವೇದಿಕೆಯ ರಾಜ್ಯ ಕಾರ್ಯದರ್ಶಿ ಶರಣಪ್ಪ ವಾಡೇಕರ್ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ, ಸ್ಥಳೀಯ ಗ್ರಾಮ ಲೇಖಪಾಲಕರು ಸಾರ್ವಜನಿಕರಿಂದ ಹಣ ಪಡೆದು ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸ್ವತಃ ತಾವೇ ಮಾಡಿಸಿಕೊಡುವ ಕೆಲಸ ಮಾಡತೊಡಗಿದ್ದು ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಡಾ.ಅಂಬೇಡ್ಕರ್ ಸಮುದಾಯ ಭವನ ಬಿರುಕು ಬಿಟ್ಟು ಶಿಥಿಲಾವಸ್ಥೆ ತಲುಪಿದ್ದು, ಮಳೆ ಸುರಿದಾಗ ಸೋರುತ್ತಿದೆ. ಕಟ್ಟಡವನ್ನು ದುರಸ್ಥಿ ಮಾಡಬೇಕು. ವಾರ್ಡ್ 22ರ ವಿಜಯನಗರದಲ್ಲಿ ಮಹಿಳೆಯರಿಗಾಗಿ ಸಮುದಾಯ ಶೌಚಾಲಯ ನಿರ್ಮಿಸಿಕೊಡಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.