ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಗುಲ್ಬರ್ಗ: ವಿರೂಪಾಕ್ಷೇಶ್ವರ ಶಿಕ್ಷಣ ಸಮಿತಿಯ ಅಡಿಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಗುರುಲಿಂಗ ಶಿವಾಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಾಗಾಂವ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ ಹುಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಡಾ. ಯುನಿಸ್, ಬಾಪುಗೌಡ ಪಾಟೀಲ್, ಸಂತೋಷ ರಾಂಪುರೆ, ಶರಣಬಸವ ಅಣವಾರ, ಶಾಂತಕುಮಾರ ಉಪಸ್ಥಿತರಿದ್ದರು. ರೇವಣಸಿದ್ದಪ್ಪ ಎಂ. ನಿಂಬಾಜಿ ಕಾರ್ಯಕ್ರಮ ನಿರೂಪಿಸಿದರು. ಅನಿಲಕುಮಾರ ಎಂ. ಕೋರಿ ಸ್ವಾಗತಿಸಿ, ರಾಜುಕುಮಾರ ಎಸ್. ಬೆಳೂರಗೆ ವಂದಿಸಿದರು.
ವಿಶ್ವ ಬೀದಿ ಮಕ್ಕಳ ದಿನಾಚರಣೆ
ಗುಲ್ಬರ್ಗ: ವಿಶ್ವ ಬೀದಿ ಮಕ್ಕಳ ದಿನಾಚರಣೆಯ ಅಂಗವಾಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಾರ್ಗದರ್ಶಿ ಸೊಸೈಟಿ ಸಬ್ ಸೆಂಟರ್ ವಾಡಿ ಸಂಯುಕ್ತಾಶ್ರಯದಲ್ಲಿ ವಾಡಿಯ ಬಾಲಕಾರ್ಮಿಕ ಶಾಲೆಯಲ್ಲಿ ವಿಶ್ವ ಬೀದಿಯ ಮಕ್ಕಳ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರೀಯ ವಿವಿ ಸಹಾಯಕ ಪ್ರಾಧ್ಯಾಪಕ ಡಾ. ಲಕ್ಷ್ಮಣ ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಆನಂದರಾಜ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ರೇಖಾ ನರಗುಂದ, ಅಮರನಾಥ ಹತಗುಂದಿ, ಯಲ್ಲುಬಾಯಿ ಮುಗಳಕೇರ, ಪ್ರೇಮಾ ಹಲಗೆ ಮತ್ತು ಶ್ರೀದೇವಿ ಚಳ್ಳೇಕರ ಉಪಸ್ಥಿತರಿದ್ದರು. ಪ್ರವೀಣಕುಮಾರ ಕಾರ್ಯಕ್ರಮ ನಿರೂಪಿಸಿದರು. ಸುಂದರರಾಜ ಸ್ವಾಗತಿಸಿದರು. ಮರಳಮ್ಮಾ ವಂದಿಸಿದರು.
ಆಕ್ಷೇಪಣೆ ಸಲ್ಲಿಕೆಗೆ 18 ಕೊನೆ ದಿನ
ಗುಲ್ಬರ್ಗ: ಸರ್ಕಾರಿ ಪ್ರೌಢಶಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿತ್ರಕಲಾ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಶಿಕ್ಷಕರಿಂದ ಆಕ್ಷೇಪಣೆಗಳಿದ್ದಲ್ಲಿ ಮಾ.18ರೊಳಗಾಗಿ ನಿಗದಿತ ನಮೂನೆಯಲ್ಲಿ ಮಾಹಿತಿ ಭರ್ತಿಮಾಡಿ ಸಲ್ಲಿಸಬೇಕು. ಅರ್ಜಿಯ ಜೊತೆಗೆ ಪೂರಕವಾದ ದಾಖಲೆಗಳನ್ನು ಲಗತ್ತಿಸಿ ಸಂಬಂಧಿಸಿದ ಮುಖ್ಯಗುರುಗಳಿಂದ ದೃಢೀಕರಿಸಿ, ನೇರವಾಗಿ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಿ, ಸ್ವೀಕೃತಿ ಪಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ.ಪಂ.ಕ್ಕೆ ಕೋಲಿ ಸೇರ್ಪಡೆ: ಸ್ವಾಗತ
ಗುಲ್ಬರ್ಗ: ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಹೈದ್ರಾಬಾದ್ ಕರ್ನಾಟಕ ಪ್ರದೇಶ ಕಬ್ಬಲಿಗರ ಸಂಘ ಸ್ವಾಗತಿಸಿದೆ. ಅಧ್ಯಕ್ಷ ಬಸವರಾಜ ಬೂದಿಹಾಳ್, ಕಾರ್ಯಾಧ್ಯಕ್ಷ ಸಂತೋಷ ತಳ್ವಾರ, ಭೀಮಣ್ಣ ಸಾಲಿ, ಅವ್ವಣ್ಣ ಮ್ಯಾಕೇರಿ, ಪಿ.ಬಿ. ದೇಸಾಯಿ, ಸೋಮಶೇಖರ ಬಬ್ಬಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಾನೂನು ಅರಿವು-ನೆರವು
ಗುಲ್ಬರ್ಗ: ನಗರದ ಜ್ಯೋತಿಬಾ ಫುಲೆ ಪದವಿ ಕಾಲೇಜಿನಲ್ಲಿ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು-ನೆರವು ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಮಾಹಿತಿ ಹಕ್ಕು ಮತ್ತು ಸಕಾಲ ಎಂಬ ವಿಷಯದ ಮೇಲೆ ಕಾನೂನು ಅರಿವು - ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ ಉಪನ್ಯಾಸಕ ಅರ್ಪಣಾ ಜಿ. ಮಾಲೆ ಮಾತನಾಡಿದರು. ಪ್ರಾಚಾರ್ಯ ಎಸ್.ಬಿ. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

