ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ
ಅಫಜಲ್ಪುರ: ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು. ಸಮಸ್ಯೆಗಳು ಗಂಭೀರವಾಗಿದ್ದರೆ ಅಂತಹ ಸಮಸ್ಯೆಗಳನ್ನು ಬಗೆಹರಿಸಲು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಮಣ್ಣೂರ ಗ್ರಾಮದ ಜನರ ಸಮಸ್ಯೆಗಳ ಬಗ್ಗೆ ಬಂದು ತಮ್ಮ ಹತ್ತಿರ ಹೇಳಿದರೆ ಸಮಸ್ಯೆಗಳು ಸ್ಥಳದಲ್ಲೇ ಬಗೆಹರಿಸಿ ಪರಿಹಾರ ಒದಗಿಸಲಾಗುವುದು ಎಂದು ತಹಸೀಲ್ದಾರ್ ಎಂ. ಚಂದ್ರಶೇಖರ ಹೇಳಿದರು. ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಜರುಗಿದ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತಾನಾಡಿದರು. ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕಂದಾಯ ಇಲಾಖೆ ವತಿಯಿಂದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ, ಸಂಧ್ಯಾ ಸುರಕ್ಷಾ ಮೊದಲಾದ ವೇತನಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಇದಲ್ಲದೆ ವಿಚ್ಛೇದನ ಪಡೆದ 45 ವರ್ಷದ ಮಹಿಳೆಯರಿಗೆ ಸರ್ಕಾರದಿಂದ ಪರಿಹಾರ ಧನ ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು. ಗ್ರಾ..ಪಂ ಅಧ್ಯಕ್ಷ ರಮೇಶ ಬಾಕೆ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಸಿಇಒ ಎಸ್.ಪಿ. ನಂದಗಿರಿ, ಸಹಾಯಕ ಕೃಷಿ ನಿರ್ದೇಶಕ ಈಶ್ವರ ಬಾಡಗಿ, ಸಂತೋಷ ಸರಳಾ ಡೊಡ್ಡಮನಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

