ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು
ಗುಲ್ಬರ್ಗ: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ವಿಭಾಗಕ್ಕೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ ಮಾಡುವುದಾಗಿ ಕಾಂಗ್ರೆಸ್ ಸಾರ್ಕರ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಈ ನಿಟ್ಟಿನಲ್ಲಿ ಮುಖ್ಯ ಮಂತ್ರಿಗಳು ಕಳೆದ ವರ್ಷ 6 ಮತ್ತು ಈ ವರ್ಷ 6 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಮಂಜೂರಾತಿ ನೀಡುವ ಮೂಲಕ ಪೂರೈಸಿದ್ದಾರೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ತುಮಕೂರು, ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿತ್ರದುರ್ಗ ಸೇರಿದಂತೆ 6 ಕಡೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲಾಗುತ್ತಿದೆ. 2013- 14ನೇ ಸಾಲಿಗಾಗಿ ಪ್ರತಿ ಕಾಲೇಜು ಕಟ್ಟಡಕ್ಕೆ 29 ಕೋಟಿಯಂತೆ ಒಟ್ಟು 174 ಕೋಟಿ ನೀಡಲಾಗಿತ್ತು. 2014- 15ನೇ ಸಾಲಿಗಾಗಿ ಒಟ್ಟು 350 ಕೋಟಿ ನೀಡಲಾಗಿದೆ. ಇದನ್ನು ಮುಂದಿನ ಅವಶ್ಯಕತೆಗಳಿಗೆ ತಕ್ಕಂತೆ ಖರ್ಚು ಮಾಡಲಾಗುವುದು ಎಂದರು.
ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಬಳ್ಳಾರಿ ಮತ್ತು ಹುಬ್ಬಳ್ಳಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಪ್ರತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸುಮಾರು 150 ಕೋಟಿ ಖರ್ಚು ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಮೈಸೂರು, ಗುಲ್ಬರ್ಗ ಮತ್ತು ಬೆಳಗಾವಿ ವಿಭಾಗಗಳಲ್ಲಿ ರಾಜ್ಯ ಸರ್ಕಾರ ತನ್ನದೇ ಆದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಕ್ರಮ ಜರುಗಿಸಿದೆ. ಇವುಗಳಲ್ಲಿ ನೆಫ್ರಾಲಾಜಿ, ನ್ಯೂರಾಲಾಜಿ, ಯೂರಾಲಾಜಿ, ಕಾರ್ಡಿಯಾಲಾಜಿ, ಗ್ಯಾಸ್ಟ್ರೋ ಎಂಟ್ರಾಲಾಜಿ ಸವಲತ್ತುಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿರುವ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯನ್ನು ಬಲವರ್ಧನೆಗೊಳಿಸಿ ರಾಜ್ಯ ಮಟ್ಟದ ಕೇಂದ್ರವನ್ನಾಗಿ ಮಾರ್ಪಡಿಸಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ 120 ಕೋಟಿ ನೀಡಲು ಒಪ್ಪಿಗೆ ಸೂಚಿಸಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

