ಗುಲ್ಬರ್ಗಾ

ಸಮರ್ಪಕ ಕುಡಿಯವ ನೀರು ಪೂರೈಕೆಗೆ ಆಗ್ರಹ

Published On :

ಗುಲ್ಬರ್ಗ: ನಗರಾದ್ಯಂತ 55 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಪ್ರತಿಯೊಂದು ವಾರ್ಡ್‌ಗೆ ಕುಡಿಯುವ ನೀರನ್ನು ಎರಡು ಮೂರು ದಿನಕ್ಕೊಮ್ಮೆ ಬಿಡಲಾಗುತ್ತಿದೆ. ಜನರಿಗೆ ಸ್ವಚ್ಛ ನೀರು ಸಿಗುತ್ತಿಲ್ಲ. ಇದರಿಂದ ಜನರು ಕಾಲರಾ, ಡೆಂಗ್ಯು ಜ್ವರ, ಕಾಮಾಲೆ ಮುಂತಾದ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ದೂರಲಾಗಿದೆ.
ಈ ಮೊದಲು ಪ್ರತಿ ತಿಂಗಳು ನಲ್ಲಿ ನೀರಿಗಾಗಿ 100 ಶುಲ್ಕ ಇತ್ತು. ಈಗ ಅದನ್ನು 175ಕ್ಕೆ ಹೆಚ್ಚಿಸಲಾಗಿದೆ. ಜನರಿಗೆ ಹೊರೆಯಾಗಿರುವ ಈ ಶುಲ್ಕವನ್ನು ಕಡಿಮೆಗೊಳಿಸಬೇಕು ಮತ್ತು ಎಲ್ಲಾ ವಾರ್ಡ್‌ಗಳಿಗೆ ಪ್ರತಿದಿನ ಕುಡಿಯುವ ನೀರು ಪೂರೈಸಬೇಕು ಎಂದು ಸಮಿತಿ ಅಧ್ಯಕ್ಷ ಸಾಜಿದ್ ಅಹ್ಮದ್ ದಿಗ್ಗಾಂವಕರ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.