ಗುಲ್ಬರ್ಗಾ

ಎಸ್ಟಿಗೆ ಕೋಲಿ ಸಮಾಜ; ಪ್ರಸ್ತಾವನೆ

Published On :

ಚಿತ್ತಾಪುರ: ಫೆ.9ರಂದು ಯಾದಗಿರಿ ಜಿಲ್ಲೆಯ ಯಾನಗುಂದಿಯಲ್ಲಿ ಜವಳಿ ಮತ್ತು ಬಂದರು ಸಚಿವ ಬಾಬುರಾವ ಚಿಂಚನಸೂರ ನೇತೃತ್ವದಲ್ಲಿ ಹಮ್ಮಿಕೊಂಡ ಕೋಲಿ ಸಮಾಜದ ಬೃಹತ್ ರ್ಯಾಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಿ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ನಿರ್ಣಯದ ಪ್ರಸ್ತಾವನೆಯನ್ನು ಕಳುಹಿಸಲು ಭರವಸೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭರವಸೆಯಂತೆ ಸಚಿವ ಸಂಪುಟದ ಪ್ರಸ್ತಾವನೆ ಕೋಲಿ ಸಮಾಜದ ಮುಖಂಡ ಭೀಮಣ್ಣ ಸಾಲಿ ಹಾಗೂ ರಮೇಶ ಚಿಂಚನಸೂರ ಅವರು ದೆಹಲಿಗೆ ತೆರಳಿ ಕೇಂದ್ರ ಪೆಟ್ರೋಲಿಯಂ ಸಚಿವ ವೀರಪ್ಪ ಮೋಯ್ಲಿಗೆ ಹಾಗೂ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತು ಆಸ್ಕರ್ ಫರ್ನಾಂಡಿಸ್‌ರಿಗೆ ಭೇಟಿಯಾಗಿ ಸಲ್ಲಿಸಿದರು.
ಸಚಿವ ಬಾಬುರಾವ ಚಿಂಚನಸೂರ ಅವರ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಕ್ಕೆ ಸಚಿವ ಬಾಬುರಾವ ಚಿಂಚನಸೂರಗೆ ರಾಜ್ಯದ ಸಿಎಂಗೆ ಅವರಿಗೆ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೋಯ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.