ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಸೂಚನೆ
ಯಾದಗಿರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಯಾದಗಿರಿ ಜಿಲ್ಲೆ ವ್ಯಾಪ್ತಿಯ ಸುರಪುರ, ಶಹಾಪುರ, ಯಾದಗಿರಿ ಹಾಗೂ ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ತಮ್ಮ ಹೆಸರನ್ನು ನಿಗದಿತ ನಮೂನೆ-6 ರಲ್ಲಿ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಅವರುಗಳು ಸ್ಥಳಾಂತರ ಹೊಂದಿದ್ದಲ್ಲಿ, ಮೃತ ಹೊಂದಿದ್ದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಅವರುಗಳ ಹೆಸರನ್ನು ತೆಗೆದು ಹಾಕಲು ನಿಗದಿತ ಅರ್ಜಿ ನಮೂನೆ-7 ರಲ್ಲಿ ಮತ್ತು ಮತದಾರರ ಪಟ್ಟಿಯಲ್ಲಿರುವ ನಮೂದುಗಳನ್ನು ಸರಿಪಡಿಸಲು ನಿಗದಿತ ಅರ್ಜಿ ನಮೂನೆ-8 ರಲ್ಲಿ ಅಲ್ಲದೇ ಒಂದೇ ಮತಕ್ಷೇತ್ರದ ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಹೆಸರು ವರ್ಗಾವಣೆ ಮಾಡುವಂತಿದ್ದಲ್ಲಿ ನಿಗದಿತ ಅರ್ಜಿ ನಮೂನೆ-8 (ಎ)ರಲ್ಲಿ ಅರ್ಜಿಯನ್ನು ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಲ್ಲಿ ಆಗಲಿ, ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಕಾರ್ಯಾಲಯಗಳಲ್ಲಿ ಆಗಲಿ ಅಥವಾ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ಯಾದಗಿರಿ ಇವರ ಕಾರ್ಯಾಲಯದಲ್ಲಿಯಾಗಲಿ, ಆನ್ ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಈ ಕುರಿತು ಮಾ.9ದಂದು ವಿಶೇಷ ಕ್ಯಾಂಪೇನ್ ದಿನವೆಂದು ಪರಿಗಣಿಸಿ, ಅಂದು ಬೆ.9ರಿಂದ ಸಂಜೆ 6ರವರೆಗೆ ಎಲ್ಲ ಮತದಾನ ಕೇಂದ್ರಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಅರ್ಜಿ ಸ್ವೀಕರಿಸುವ ವ್ಯವಸ್ಥೆ ಮಾಡಲಾಗಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಜಮಾದಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

