ಸದೃಢ ದೇಶ ನಿರ್ಮಾಣಕ್ಕೆ ಪ್ರಾಚಾರ್ಯ ಹೂಗಾರ ಕರೆ
ಸುರಪುರ: ಈ ದೇಶದ ಭವಿಷ್ಯ ಯುವಕರ ಮೇಲಿದೆ. ಯುವಕರು ಉನ್ನತ ವ್ಯಾಸಂಗ ಮಾಡಿ, ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಸರ್ಕಾರಿ ಹುದ್ದೆಗೆ ಸೇರಿ ಸದೃಢ ದೇಶ ನಿರ್ಮಾಣಕ್ಕೆ ಮುಂದಾಗಬೇಕು ಎಂದು ನಿವೃತ್ತ ಪ್ರಾಚಾರ್ಯ ಬಿ.ಪಿ.ಹೂಗಾರ್ ಕರೆ ನೀಡಿದರು. ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದಡಿಯಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಅವರು ಮಾತನಾಡುತ್ತ ಅಧುನಿಕತೆಯ ಭರಾಟೆಯಲ್ಲಿ ಯುವಕರು ದುಶ್ಚಟಗಳ ದಾಸರಾಗುತ್ತಿದ್ದಾರೆ. ಇದರಿಂದ ದೈಹಿಕ ಮತ್ತು ಬೌದ್ಧಿಕವಾಗಿ ಕ್ಷೀಣರಾಗುತ್ತಿದ್ದಾರೆ. ಭವ್ಯ ಭಾರತದ ಸತ್ಪ್ರಜೆಗಳಾಗಬೇಕಾಗಿದ್ದ ಯುವಕರು ಇಂದು ಪಾಶ್ಚಾತ್ಯ ಸಂಸ್ಕೃತಿಯಿಂದ ದಾರಿ ತಪ್ಪುತ್ತಿರುವುದು ದುರದೃಷ್ಟದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ಗುಲ್ಬರ್ಗದ ಡಾ. .ಆರ್.ಅಂಬೇಡ್ಕರ್ ಕಾಲೇಜಿನ ಪ್ರಾಂಶುಪಾಲ ಡಾ. ಬಸವರಾಜ ಕುಮಕನೂರು 371 (ಜೆ) ವಿಶೇಷತೆ ಮತ್ತು ಅನುಕೂಲತೆಗಳ ಕುರಿತು, ಗುಲ್ಬರ್ಗದ ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಕಾಶಿನಾಥ ಬಿರಾದಾರ್ ಉಪನ್ಯಾಸ ನೀಡಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

