ಪರಿಸರ ಮಿತ್ರ ಶಾಲೆ: ಗಾಜರಕೋಟ್ ಸಾಧನೆ
ಗುರುಮಠಕಲ್: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಳ್ಳಾರಿಯ ಗೌತಮ ಬುದ್ಧ ಸ್ಮಾರಕ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆದ, 2013-14ನೇ ಸಾಲಿನ ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲೆಯ ಸ್ಪರ್ಧೆಯಲ್ಲಿ ಗಾಜರಕೋಟ್ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಮಾದರಿಯಾಗಿದೆ.
ಇಂದಿನ ಪರಿಸರ ಮಾಲಿನ್ಯಭರಿತ ದಿನಗಳಲ್ಲಿ ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಭಾವಿಸಿ ಇಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಶಾಲೆ ಆವರಣದಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರ ರಕ್ಷಣೆಯಲ್ಲಿ ತೊಡಗಿದ್ದಕ್ಕೆ ಗಣ್ಯರು ಶ್ಲಾಘಿಸಿದ್ದಾರೆ. ಪರಿಸರ ಮಿತ್ರ ಶಾಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಕ್ಕೆ ಎಸ್ಡಿಎಮ್ಸಿ ಅಧ್ಯಕ್ಷ ಅಶೋಕ ಕಲಾಲ್ ಮತ್ತು ಸದಸ್ಯರು, ಶಾಲೆ ಮುಖ್ಯಗುರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

