ಗುಲ್ಬರ್ಗಾ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿ

Published On :

ಯಾದಗಿರಿ: ನಾಡಿನ ಜನತೆ ಅಧ್ಯಾತ್ಮಿಕ ತಳಹದಿಯ ಮೇಲೆ ಉತ್ತಮ ಸಂಸ್ಕಾರ ಪಡೆಯುವುದರ ಜೊತೆಗೆ ದುಶ್ಚಟಗಳಿಂದ  ದೂರವಿರುವ ಮೂಲಕ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ ಕೆಲಸ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ ನುಡಿದರು.
 ಸೂಗೂರಿನ ಭೋಜಲಿಂಗೇಶ್ವರ 19ನೇ ಜಾತ್ರಾ ಮಹೋತ್ಸವದ ಧರ್ಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಮಾನವ ಜನ್ಮ ಶ್ರೇಷ್ಠವಾದದು. ನಿಸರ್ಗದಿಂದ ಕಲಿಯಬೇಕಾದದ್ದು ಸಾಕಷ್ಟಿದೆ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಇನ್ನೊಬ್ಬರಿಗೆ ಸಹಾಯ, ಸಹಕಾರ ನೀಡುತ್ತ ಬಾಳಿದರೆ ಮಾತ್ರ ಅವರ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.
  ಹೋತಪೇಟದ ಕೈಲಾಸ ಆಶ್ರಮದ ಶ್ರೀಗಳಾದ ಶಿವಲಿಂಗ ಸ್ವಾಮೀಜಿ ಮಾತನಾಡಿ, ಶ್ರೀಮಠವು ಜನರಲ್ಲಿ ಧರ್ಮ ಜಾಗೃತಿ ಮೂಡಿಸಿ ಒಳ್ಳೆಯ ಮಾರ್ಗದತ್ತ ಕೊಂಡೊಯ್ಯುತ್ತಿರುವುದು ಬದಲಾವಣೆಯ ಸಂಕೇತವಾಗಿದೆ ಎಂದರು. ಜನತೆ ಬದುಕಿನಲ್ಲಿ ಯೋಗ್ಯ ಗುರುಗಳಿಂದ ಧರ್ಮ ಸಂಸ್ಕಾರ ಪಡೆದು ಭಾರತೀಯ ಸಂಸ್ಕೃತಿಯನ್ನು ಉಳಿಸಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಠದ ಪೀಠಾಧಿಪತಿ ಹಿರಗಪ್ಪ ತಾತನವರು ವಹಿಸಿ ಮಾತನಾಡಿದರು.
ವೇದಿಕೆ ಮೇಲೆ ಗುರುಸಿದ್ದ ಸ್ವಾಮೀಜಿ, ಕುಮಾರ ಭೋಜರಾಜ್, ನಿವೃತ್ತ ತಹಸೀಲ್ದಾರ್ ನರಸಿಂಗರಾವ್, ಬಸವರಾಜಪ್ಪ ಕುರಕುಂದಿ, ಶಿವನಗೌಡ ಪಾಟೀಲ್, ಈರಣ್ಣ ಬಲಕಲ್ ಸೇರಿದಂತೆ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.