ಮುದ್ರಕರ ವಿವರ ಕಡ್ಡಾಯ: ಡಿಸಿ ಆದೇಶ
ಗುಲ್ಬರ್ಗ: ಲೋಕಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ಚುನಾವಣೆಗೆ ಸಂಬಂಧಿಸಿದ ಯಾವುದೇ ಪೋಸ್ಟರ್, ಬ್ಯಾನರ್, ಕರಪತ್ರ ಇತ್ಯಾದಿಗಳನ್ನು ಮುದ್ರಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 77(1) ಮತ್ತು 127(ಎ) ಮೇರೆಗೆ, ಚುನಾವಣೆಗೆ ಸಂಬಂಧಿಸಿದ ಯಾವುದೇ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುದ್ರಿಸಿದಲ್ಲಿ ಅಂಥ ಪ್ರಚಾರ ಸಾಮಗ್ರಿ ಮೇಲೆ ಮುದ್ರಕರ ಹೆಸರು, ರಾಜಕೀಯ ಪಕ್ಷ, ಉಮೇದುವಾರರ ಹೆಸರು ಹಾಗೂ ಮುದ್ರಿಸಿದ ಪ್ರತಿಗಳ ಸಂಖ್ಯೆಗಳನ್ನು ಕಡ್ಡಾಯವಾಗಿ ನಮೂದಿಸಿ ಅವುಗಳ 4 ಪ್ರತಿಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಘೋಷಣಾ ಪತ್ರದೊಂದಿಗೆ ಸಲ್ಲಿಸತಕ್ಕದ್ದು. ತಪ್ಪಿದಲ್ಲಿ ಅಂಥ ಮುದ್ರಣಾಲಯದವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಸಹಕರಿಸಬೇಕೆಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

