ನೌಕರರ ವರ್ಗಾವಣೆಗೆ ಒತ್ತಾಯ
ಚಿತ್ತಾಪುರ: ತಾಲೂಕಿನ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಲವಾರು ವರ್ಷಗಳಿಂದ ಒಂದೇ
ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದ ಅಡಳಿತಕ್ಕೆ ಜಿಡ್ಡು ಹಿಡಿದಂತಾಗಿ ತಾಲೂಕಿನ ಅಡಳಿತದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕರವೇ (ಶಿವರಾಮೇಗೌಡ) ಬಣದ ತಾಲೂಕು ಅಧ್ಯಕ್ಷ ಚಂದ್ರಕಾಂತ ನಾಟೀಕಾರ ಹೇಳಿದ್ದಾರೆ.
ತಹಸೀಲ ಕಚೇರಿ, ತಾಲೂಕು ಪಂಚಾಯತ್ ಹಾಗೂ ಪುರಸಭೆಗಳಲ್ಲಿ ಬಡವರಿಗೆ ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪುರಸಭೆಯಲ್ಲಿನ ಜನರ ಕೆಲಸಕ್ಕೆ ವಿಳಂಬ ಮಾಡುತ್ತಿರುವುದೂ ಸೇರಿದಂತೆ ಇತರೆ ಸೇವೆಗಳನ್ನು ನೀಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಇಲ್ಲಿನ ಸಿಬ್ಬಂದಿ ಹಲವಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿರುವುದು ಇದಕ್ಕೆ ಕಾರಣವಾಗಿದೆ. ಈ ಇಲಾಖೆಗಳ ಸಿಬ್ಬಂದಿ ಜನರೊಂದಿಗೆ ಅನುಚಿತವಾಗಿ ನಡೆದುಕೊಳ್ಳುವುದು, ಕೆಲಸ ಮಾಡಿಕೊಡಲು ಸತಾಯಿಸುತ್ತಿರುವುದು ಸಾಮಾನ್ಯವಾಗಿದೆ ಎಂದು ಅರೋಪಿಸಿದರು. ಈಗ ಲೋಕಸಭೆ ಚುನಾವಣೆ ನಡೆಯಲಿದೆ. ನಿಷ್ಪಕ್ಷಪಾತ ಹಾಗೂ ಶಾಂತಿಯುತ ಮತದಾನ ನಡೆಯಲು ಇದರಿಂದ ಅಡಚಣಿ ಅಗುವ ಸಾಧ್ಯತೆಗಳಿವೆ. ಹೀಗಾಗಿ ತಾಲೂಕಿನಲ್ಲಿ ಮೂರು ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕೂಡಲೇ ವರ್ಗಾವಣೆ ಮಾಡಲು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

