'ಕಚ್ಚಾಡುವ ಸಿಇಗಳ ವರ್ಗಾಯಿಸಿ'
ಶಹಾಪುರ: ಕೇವಲ ಅಧಿಕಾರವೇ ಮುಖ್ಯವೆಂದು, ಅದನ್ನೇ ಪ್ರತಿಷ್ಠೆಯನ್ನಾಗಿ ಮಾಡಿಕೊಂಡು ರೈತರ ಕಾಳಜಿ ಮರೆತ ಇಬ್ಬರು ಸಿಇ ಅವರನ್ನು ಬೇರೆಡೆಗೆ ವರ್ಗಾಯಿಸಿ ದಕ್ಷ, ಪ್ರಾಮಾಣಿಕ ಸಿ.ಇ ಅನ್ನು ಭೀ.ಗುಡಿ ಕಾಲುವೆ ವಲಯ -1 ಕ್ಕೆ ನೇಮಿಸಿ ಈ ಭಾಗದ ರೈತರ ಜೀವನಾಡಿಯಾಗಿರುವ ನೀರಾವರಿ ಕಾಲುವೆಗಳನ್ನು ಉಳಿಸಿ ಸಂರಕ್ಷಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ. ಈ ಸಂದರ್ಭದಲ್ಲಿ ಭೀ.ಗುಡಿ ನೀರಾವರಿ ಆಡಳಿತ ಕಚೇರಿ ಮುಂದೆ ಸಾಂಕೇತಿಕ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಎಸ್.ಎಮ್.ಸಾಗರ, ರೈತ ಮುಖಂಡರಾದ ದಾವಲಸಾಬ ನದಾಫ್, ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಲ್ಲನಗೌಡ ಮಾಲಿ ಪಾಟೀಲ, ಪ್ರ. ಕಾರ್ಯದರ್ಶಿ ಎಮ್. ಎಸ್. ಗೌಡ, ಸಿದ್ದಯ್ಯ ಹಿರೇಮಠ ಇತರರು ಇದ್ದರು.
ಹಲ್ಲೆ; ಪ್ರತಿಭಟನೆ
ಯಾದಗಿರಿ:ಇಂಧನ ಸಚಿವ ಡಿ.ಕೆ. ಶಿವಕುಮಾರ ಹಾಗೂ ಅವರ ಬೆಂಬಲಿಗರು ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಂಜೀವರಾವ ಕುಲಕರ್ಣಿ ಮಾತನಾಡಿ, ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದ್ದರೂ ಸರ್ಕಾರ ಕ್ರಮಕೈಗೊಳ್ಳದೆ ಸುಮ್ಮನಿರುವುದು ಖಂಡನೀಯ. ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಮಾಧ್ಯಮ ಪ್ರತಿನಿಧಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ರಾಜ್ಯದಲ್ಲಿ ನಿರಂತರವಾಗಿ ಪತ್ರಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ತಡೆಗೆ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ, ಖಜಾಂಚಿ ಚಿದಂಬರ ಪ್ರಸಾದ, ಅನಿಲ ದೇಶಪಾಂಡೆ ಮುಂತಾದವರು ಇದ್ದರು.
ಅರ್ಜಿ ಆಹ್ವಾನ
ಯಾದಗಿರಿ: ಜಿಲ್ಲೆಯಲ್ಲಿ ಸರ್ಕಾರಿ ಖಾಸಗಿ ಸಹ ಭಾಗಿತ್ವದಲ್ಲಿ ತೀವ್ರತರವಾದ ಮಾನಸಿಕ ರೋಗಿಗಳಿಗಾಗಿ ಡೇ ಕೇರ್ ಸೆಂಟರ್ ಪುನರ್ ವಸತಿ ಕೇಂದ್ರವನ್ನು ಸ್ಥಾಪಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸರ್ಕಾರದಿಂದ ರೂಪಿಸಲ್ಪಟ್ಟ ನಿಯಮಾವಳಿಗಳ ಪ್ರಕಾರ ಅರ್ಹತೆಯನ್ನು ಹೊಂದಿದ ಸರ್ಕಾರೇತರ ಸಂಘ ಸಂಸ್ಥೆಗಳು ತಮ್ಮ ಅಧೀನದಲ್ಲಿರುವ ಕಟ್ಟಡದಲ್ಲಿ ಈ ಕೇಂದ್ರವನ್ನು ನಡೆಸತಕ್ಕದ್ದು. ಇದರ ಮೇಲ್ವಿಚಾರಣೆಯನ್ನು ಡೇ ಕೇರ್ ಸೆಂಟರ್ ಪುನರ್ ವಸತಿ ಕೇಂದ್ರ ಸಮಿತಿಯು ಮಾಡಲಿದೆ. ಅರ್ಜಿ ಸಲ್ಲಿಸಲು ಮತ್ತು ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಲ್ಲಿಕಾರ್ಜುನ ಮುಕ್ಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

