ಗುಲ್ಬರ್ಗಾ

ಮತದಾನ ಹೆಚ್ಚಳಕ್ಕೆ ಯತ್ನಿಸಿ

Published On :

ಗುಲ್ಬರ್ಗ: ಮುಕ್ತ ಮತ್ತು ನ್ಯಾಯಸಮ್ಮತ ಹಾಗೂ ಶಾಂತಿಯುತ ಲೋಕಸಭೆ ಚುನಾವಣೆ ನಡೆಸುವುದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲ ಅಧಿಕಾರಿಗಳು ಹೆಚ್ಚು ಶ್ರಮ ವಹಿಸಬೇಕೆಂದು ಭಾರತ ಚುನಾವಣಾ ಆಯೋಗದ ಸ್ವೀಪ್ ವೀಕ್ಷಕ ರಾಜೀವ್ ಜೈನ್ ಹೇಳಿದರು.
ನಗರದಲ್ಲಿ ಶುಕ್ರವಾರ ಸ್ವೀಪ್ ಕಾರ್ಯಕ್ರಮದ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವೀಪ್ ಕಾರ್ಯಕ್ರಮದ ಎಲ್ಲ ನೋಡಲ್ ಅಧಿಕಾರಿಗಳು ಮತದಾನ ಮಾಡಲು ಆಗಮಿಸುವ ಮತದಾರರಿಗೆ ಕುಡಿವ ನೀರು, ನೆರಳು ಮುಂತಾದ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ಖಾತರಿಪಡಿಸಿಕೊಂಡು ಎಲ್ಲ ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳ ಪಾತ್ರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ವ್ಯಾಪಕ ಕಾರ್ಯಕ್ರಮಗಳನ್ನು ಸಂಘಟಿಸಬೇಕೆಂದರು.
ಹಕ್ಕು ಚಲಾಯಿಸಲು ಪ್ರೇರೇಪಿಸಿ: ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಮಾತನಾಡಿ, ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಸುಳಿವು ನೋಡಲ್ ಅಧಿಕಾರಿಗಳ ಗಮನಕ್ಕೆ ಬಂದರೆ ನಿರ್ಭಯವಾಗಿ ಮತ ಚಲಾಯಿಸುವಂತೆ ಹಾಗೂ ಮತದಾನ ನಿರಾಕರಿಸದಂತೆ ಮತದಾರರ ಮನವೊಲಿಸಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮಾ.16ರ ವರೆಗೆ ಅವಕಾಶವಿದ್ದು, ಮತದಾನದ ಹಿಂದಿನ ದಿನದವರೆಗೆ ಸ್ವೀಪ್ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕೆಂದರು.
ಸ್ವೀಪ್ ಸಮಿತಿ ಅಧ್ಯಕ್ಷ ಟಿಎಚ್‌ಎಂ ಕುಮಾರ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿರುವ ಪ್ರದೇಶಗಳನ್ನು ಹೆಚ್ಚು ಗುರಿಯಾಗಿರಿಸಿಕೊಂಡು ಮತದಾರರ ಜಾಗೃತಿಗಾಗಿ ಹಮ್ಮಿಕೊಳ್ಳಾಗುವ ನಿರಂತರ ಸ್ವೀಪ್ ಚಟುವಟಿಕೆಗಳ ವರದಿಯನ್ನು ಮೂರು ದಿನಕ್ಕೊಮ್ಮೆ ಇಲಾಖಾ ಮುಖ್ಯಸ್ಥರ ಮೂಲಕ ಸಲ್ಲಿಸಬೇಕೆಂದು ಸೂಚಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.