ಗುಲ್ಬರ್ಗಾ

ಈ ಬಾರಿ ಧರಂ, ಖರ್ಗೆಗೆ ಸೋಲಿನ ರುಚಿ: ಚವ್ಹಾಣ

Published On :

ಚಿಂಚೋಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತು ಬೀದರ್ ಸಂಸದ ಧರಂಸಿಂಗ್ ಅವರು ಸೋಲಿನ ರುಚಿ ಕಾಣಲಿದ್ದಾರೆ ಎಂದು ಮಾಜಿ ಸಚಿವ ಬಿಜೆಪಿ, ಮುಖಂಡ ಬಾಬುರಾವ ಚವ್ಹಾಣ ಹೇಳಿದ್ದಾರೆ.
 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ ಸಂಸದ ಎನ್.ಧರಂಸಿಂಗ್ ಅವರು ತಮ್ಮ 5 ವರ್ಷದ ಅಧಿಕಾರಾವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ರಾಷ್ಟ್ರದ ಗಮನ ಸೆಳೆದ ಕುಂಚಾವರಂ ಗಡಿಭಾಗದ ಲಂಬಾಣಿ ತಾಂಡಗಳಲ್ಲಿ ಹೆಣ್ಣು ಶಿಶುಗಳ ಮಾರಾಟ ಪ್ರಕರಣದ ಬಗ್ಗೆ ನಾನು ಕಾಂಗ್ರೆಸ್‌ನಲ್ಲಿದ್ದಾಗ ಅನೇಕ ಸಲ ಅವರಿಗೆ ಮನವರಿಕೆ ಮಾಡಿದರೂ ನನ್ನ ಮಾತಿಗೆ ಬೆಲೆ ಕೊಡಲಿಲ್ಲ.
ಕಾಂಗ್ರೆಸ್ ಅಪ್ಪ- ಮಕ್ಕಳ ಪಕ್ಷ: ಒಮ್ಮೆಯೂ ಸೌಜನ್ಯಕ್ಕಾದರೂ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಹಾಗೂ ಬಡವರ ಬಗ್ಗೆ ಕಾಳಜಿ ವಹಿಸಲಿಲ್ಲ. ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಲಂಬಾಣಿ ಜನರ ಮತಗಳನ್ನು ಕೇಳುವ ನೈತಿಕತೆ ಹಕ್ಕಿಲ್ಲ. ಕುಂಚಾವರಂ ಗಡಿಭಾಗದಲ್ಲಿ ಆಗುತ್ತಿರುವ ಹೆಣ್ಣು ಶಿಶುಗಳ ಮಾರಾಟದ ಬಗ್ಗೆ ಕಳೆದ ಬಿಜೆಪಿ ಸರ್ಕಾರದ ಮೇಲೆ ಒತ್ತಡ ತರಲಿಲ್ಲ. ಯಾವುದೇ ಅನುದಾನ ನೀಡಲಿಲ್ಲವೆಂದು ಮಾಜಿ ಸಚಿವ ಬಾಬುರಾವ ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿ, ಕಾಂಗ್ರೆಸ್ ಕೇವಲ ಅಪ್ಪ ಮಕ್ಕಳಿಗೆ ಅವಕಾಶ ನೀಡುತ್ತಿದೆ. ಬೇರೆಯವರಿಗೆ ಅವಕಾಶ ಸಿಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಅನೇಕ ಅಭಿವೃದ್ಧಿ ಕಾರ್ಯ ಮಾಡಿದ ಬಿಎಸ್‌ವೈ: ಬೀದರ್ ಲೋಕಸಭಾ ಮತಕ್ಷೇತ್ರದ ಸಂಸದರಾಗಿ 5 ವರ್ಷಗಳು ಗತಿಸಿದರೂ ರಸ್ತೆಗಳ ಅಭಿವೃದ್ಧಿಯಾಗಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಜಿ ಸಿಎಂ ಯಡಿಯೂರಪ್ಪ ಅವರು ಈ ಭಾಗಕ್ಕೆ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಬಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಾರೆ. 2004ರಲ್ಲಿ ಕಾಂಗ್ರೆಸ್ ಎಸ್.ಎಂ. ಕೃಷ್ಟ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣಸಚಿವರಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಕೊಡಿಸಿದ್ದೇನೆಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಲಂಬಾಣಿ ತಾಂಡಗಳಲ್ಲಿ ಜನರು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ. ಶಾಸಕರು ಇತ್ತ ಗಮನಹರಿಸಬೇಕೆಂದು ಮಾಜಿ ಸಚಿವ ಬಾಬುರಾವ ಚವ್ಹಾಣ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.