ಪ್ರಗತಿ ಹೊಂದಲು ಸ್ತ್ರೀಯರಿಗೆ ಸಲಹೆ
ಅಫಜಲ್ಪುರ: ಇಂದಿನ ದಿನಗಳಲ್ಲಿ ಮಹಿಳೆಯರು ಪುರುಷರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲವೆಂದು ಪ್ರತಿ ರಂಗಗಳಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ಇಂದಿನ ದಿನಗಳಲ್ಲಿ ಸ್ತ್ರೀ ಶಕ್ತಿಯು ಸಂಘ ಪ್ರಾಮಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಪ್ರಶಾಂತ ಕುಮಾರ ಡಿ. ಹೇಳಿದರು.
ಅವರು ತಾಲೂಕಿನ ಮಣ್ಣುರ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾಸಮಿತಿ ಅಫಜಲ್ಪುರ ತಾಲೂಕು ನ್ಯಾಯಾವಾದಿಗಳ ಸಂಘ ಅಫಜಲ್ಪುರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಬಲಾತ್ಕಾರದಂತಹ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದನ್ನು ತಡೆಗಟ್ಟಲು ಮಹಿಳೆಯರು ಶಿಕ್ಷಣ ಪಡೆದುಕೊಳ್ಳಬೇಕು. ಇದರ ಜೊತೆಗೆ ಮಾನಸಿಕವಾಗಿ, ಆರ್ಥಿಕವಾಗಿ ಮಹಿಳೆಯರು ಸಬಲರಾಗಬೇಕು. ಆಗ ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ನ್ಯಾಯವಾದಿಗಳಾದ ಕೆ.ಜಿ. ಪೂಜಾರಿ ಎಸ್.ಎಸ್. ಪಾಟೀಲ ಸಿ.ಎಸ್. ಹಿರೆಮಠ ಮಹಿಳೆಯರ ಆಸ್ತಿ ಹಕ್ಕುಗಳು ಹಾಗೂ ಮಹಿಳೆಯರ ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಮಾತನಾಡಿದರು. ಸಿಡಿಪಿಓ ಸರಳಾ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಓ ರಮೇಶ ಪಾಟೀಲ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀಬಾಯಿ ಕುಲಕರ್ಣಿ ಕಮಲಾ ಬಾಯಿ ಉಪ್ಪಿನ ಸಂಜೀವ ದೈತನ ಸೇರಿದಂತೆ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಶಾರದಾ ಅವಟೆ ಸ್ವಾಗತಿಸಿ, ನಿರೂಪಿಸಿದರು. ಮಲಕಮ್ಮಾ ನಿಂಬಾಳ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

