ಟ್ಯಾಂಕರ್ಗೆ ಬೆಂಕಿ
ಗುಲ್ಬರ್ಗ: ನಗರದ ಗಂಜ್ ಪ್ರದೇಶದ ಅಣಕಲ್ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಡೀಸೆಲ್ ಟ್ಯಾಂಕರ್ ಮಂಗಳವಾರ ಬೆಳಗ್ಗೆ ಬೆಂಕಿಗೆ ಅಹುತಿಯಾಗಿದೆ. ಸುದ್ದಿ ತಿಳಿದ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ. ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಇದ್ದು, ಜನನಿಬಿಡ ಪ್ರದೇಶವಾಗಿದೆ. ಹೆಚ್ಚಿನ ಅನುಹುತವಾಗದೇ ಇರುವುದರಿಂದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮೀಣ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25ರಂದು ಶಖಾಪುರದಲ್ಲಿ ಜೋಡಿ ರಥೋತ್ಸವ
ಜೇವರ್ಗಿ: ತಾಲೂಕಿನ ಸುಕ್ಷೇತ್ರ ಶಖಾಪುರ (ಎಸ್ಎ)ದಲ್ಲಿ ಮಾ.25 ರಂದು ಸಿದ್ಧಕುಲ ಚಕ್ರವರ್ತಿ ವಿಶ್ವಾರಾಧ್ಯರು ಮತ್ತು ಧರ್ಮಪತ್ನಿ ಮಾತೋಶ್ರೀ ಬಸವಾಂಬೆ ತಾಯಿಯವರ 63ನೇ ಜಾತ್ರಾ ಮಹೋತ್ಸವ ಹಾಗೂ ಜೋಡು ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶಖಾಪುರ ವಿಶ್ವಾರಾಧ್ಯರ ತಪೋವನ ಮಠದ ಪೀಠಾಧಿಪತಿ ಸಿದ್ಧರಾಮ ಶಿವಾಚಾರ್ಯರು ಹೇಳಿದರು. ಶಖಾಪುರ (ಎಸ್ಎ) ಗ್ರಾಮದ ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.15 ರಿಂದ 25 ರವರೆಗೆ ಸಂಜೆ 6ಕ್ಕೆ ಮಾತೋಶ್ರೀ ಬಸವಾಂಬೆ ತಾಯಿಯವರ ಪುರಾಣ ಕಾರ್ಯಕ್ರಮ ನಡೆಯಲಿದೆ. ಪಂಡಿತ ಕಲ್ಲಿನಾಥ ಶಾಸ್ತ್ರಿ ಅಡ್ನೂರ್ ಪುರಾಣ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮಾ.25 ರಂದು ಬೆಳಗ್ಗೆ 11ಕ್ಕೆ ಪುರಾಣ ಮಂಗಲ ಕಾರ್ಯಕ್ರಮ ನಡೆಯಲಿದೆ. ಸಂಜೆ 6ಕ್ಕೆ ಪುರಾಣ ಮಂಗಲ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಠಾಧೀಶರು, ರಾಜಕೀಯ ಮುಖಂಡರು, ಸಂಗೀತಗಾರರು ಭಾಗವಹಿಸಲಿದ್ದಾರೆ. ವಿಶೇಷವಾಗಿ ಅಂದು ತಾಲೂಕಿನ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಸಹಯೋಗದೊಂದಿಗೆ ಕೃಷಿ ಮೇಳವನ್ನು ಆಯೋಜಿಸಲಾಗಿದ್ದು, ಈ ಮೇಳದಿಂದ ತಾಲೂಕಿನ ರೈತರಿಗೆ ಕೃಷಿ ಕ್ಷೇತ್ರದಲ್ಲಿ ಯೋಜನೆಗಳ ಕುರಿತು ಸಮರ್ಪಕವಾಗಿ ಮಾಹಿತಿ ಪಡೆಯಬಹುದಾಗಿದೆ. ಜಾತ್ರೆ ನಿಮಿತ್ತ ಜಾನುವಾರುಗಳ ಜಾತ್ರೆ ಆಯೋಜಿಸಲಾಗಿದೆ ಎಂದು ಶಖಾಪುರ ಶ್ರೀಗಳು ತಿಳಿಸಿದರು.
ರತ್ನಮ್ಮ ನಿಧನ
ಕೆಂಭಾವಿ: ಸಮೀಪದ ಫತ್ತೆಪುರ ಗ್ರಾಮದ ಬಸನಗೌಡ ಪಾಟೀಲ ಅವರ ಪತ್ನಿ ರತ್ಮಮ್ಮ ಗೌಡತಿ (76) ನಿಧನರಾದರು. ಮೃತರಿಗೆ ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದಲ್ಲಿ ನೆರವೇರಿತು. ರತ್ನಮ್ಮ ಗೌಡತಿ ನಿಧನಕ್ಕೆ ಶಾಸಕ ಗುರುಪಾಟೀಲ ಶಿರವಾಳ, ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಸುರೇಂದ್ರರಾವ ಕುಲಕರ್ಣಿ, ಬಾಲಕೃಷ್ಣರಾವ ಕುಲಕರ್ಣಿ, ವಾಮನರಾವ ಶೋಕ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

