ಮಲ್ಲಿಕಾರ್ಜುನ ಖರ್ಗೆ ನಾಮಪತ್ರ
ಕ.ಪ್ರ. ವಾರ್ತೆ ಗುಲ್ಬರ್ಗ ಮಾ.20
ಗುಲ್ಬರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಗುರುವಾರ ನಾಲ್ಕು ಸೆಟ್ಟುಗಳಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ಜವಳಿ ಸಚಿವ ಬಾಬೂರಾವ ಚಿಂಚನಸೂರ್, ಶಾಸಕರಾದ ಮಾಲಿಕಯ್ಯ ಗುತ್ತೇದಾರ, ಅಲ್ಲಂಪ್ರಭು ಪಾಟೀಲ್ ಖರ್ಗೆಯವರ ನಾಮಪತ್ರಕ್ಕೆ ಸೂಚಕರಾಗಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ ಅವರು ಖರ್ಗೆಯವರಿಂದ ನಾಮಪತ್ರದ ಪ್ರತಿಗಳನ್ನು ಪಡೆದರು. ವಿಕಾಸ ಭವನದ ಮುಂಭಾಗದಲ್ಲಿ ಈ ಸಂದರ್ಭದಲ್ಲಿ ಜನಸಾಗರವೇ ಸೇರಿತ್ತು. ಜನರನ್ನು ಕಂಡು ಪುಳಕಿತರಾದಂತೆ ಕಂಡ ಖರ್ಗೆ, ತಾವಿದ್ದ ಕಾರಿನಿಂದ ಎದ್ದು ಹೊರಗಡೆ ಬಂದು ಎದ್ದು ನಿಂತು ಕೈ ಬೀಸುತ್ತ ಜನರಿಗೆ ಅಭಿನಂದಿಸಿದರು.
ಮಾಲಾರ್ಪಣೆ: ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಖರ್ಗೆಯವರು ಅಪಾರ ಬೆಂಬಲಿಗರೊಂದಿಗೆ ಜಗತ್ ವೃತ್ತಕ್ಕೆ ಬಂದು ಅಲ್ಲಿರುವ ಡಾ. ಅಂಬೇಡ್ಕರ್ ಹಾಗೂ ಬಸವೇಶ್ವರರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ಜಗತ್ ವೃತ್ತದಿಂದಲೇ ಅಪಾರ ಅಭಿಮಾನಿ ಬಳಗದೊಂದಿಗೆ ಮುಖ್ಯರಸ್ತೆಯುದ್ದಕ್ಕೂ ರ್ಯಾಲಿಯಲ್ಲಿ ತೆರಳಿ, ದಾರಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಸೇರಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಂತರ ಮಧ್ಯಾಹ್ನ 12.30ಕ್ಕೆ ಖರ್ಗೆ ತಮ್ಮ ನಾಮಪತ್ರ ಸಲ್ಲಿಸಿದರು. ಖರ್ಗೆ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ. ಜಿ. ಪರಮೇಶ್ವರ, ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಾಗಣಗೌಡ ಸಂಕನೂರ್, ಪ್ರಧಾನ ಕಾರ್ಯದರ್ಶಿ ಭೀಮರೆಡ್ಡಿ ಪಾಟೀಲ್, ಯುವ ನಾಯಕ ಅರುಣ ಪಾಟೀಲ್ ಕೊಡ್ಲಹಂಗರ್ಗಾ, ಪಾಲಿಕೆ ಕಾಂಗ್ರೆಸ್ ಸದಸ್ಯರು ಸೇರಿದಂತೆ ಜಿಲ್ಲೆಯ ಶಾಸಕರು, ವಿವಿಧ ಬ್ಲಾಕ್‌ಗಳಿಂದ ಆಗಮಿಸಿದ್ದ ಕಾರ್ಯಕರ್ತರು ಅನೇಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

