ಅಭಿವೃದ್ಧಿ ಕಾರ್ಯಗಳ ಮುಂದೆ ಮೋದಿ ಅಲೆ ನಡೆಯೋಲ್ಲ
ಗುಲ್ಬರ್ಗ: ಕಳೆದ 5 ವರ್ಷದ ನನ್ನ ಅಧಿಕಾರವಧಿಯಲ್ಲಿ ನಿರೀಕ್ಷೆಗೂ ಮೀರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ, ಕಾರ್ಯಗಳನ್ನು ಮಾಡಿದ್ದೇನೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳ ಮುಂದೆ ಮೋದಿ ಅಲೆಗಿಲೆ ಯಾವುದು ನಡೆಯುವುದಿಲ್ಲ ಎಂದು ರೇಲ್ವೆ ಮಂತ್ರಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್, ಕೆಜೆಪಿ, ಬಿಜೆಪಿ ತೊರೆದು ಪಕ್ಷಕ್ಕೆ ಸೇರ್ಪಡೆಯಾದವರನ್ನು ಸ್ವಾಗತಿಸಿ ಮಾತನಾಡಿದ ಅವರು, ಹೈ-ಕ ಪ್ರದೇಶ ಕಾಂಗ್ರೆಸ್ ಭದ್ರಕೋಟೆ. ಇಲ್ಲಿ ಮೋದಿ-ಗೀದಿ ಆಟ ನಡೆಯುವುದಿಲ್ಲ ಎಂದರು. ಕೇಂದ್ರದಲ್ಲಿ ಕಾರ್ಮಿಕ ಹಾಗೂ ರೇಲ್ವೆ ಮಂತ್ರಿಯಾಗಿ ದೇಶದ ಜನರ ವಿಶ್ವಾಸ ಗಳಿಸಿದ್ದೇನೆ. ಹೈ-ಕ ಪ್ರದೇಶಕ್ಕೆ ಅಷ್ಟೇ ಅಲ್ಲ, ಇಡೀ ಕರ್ನಾಟಕಕ್ಕೂ ವಿಶಿಷ್ಟ ಕೊಡುಗೆ ನೀಡಿದ್ದೇನೆ. ನಾನು ಮಾಡಿರುವ ಕಾರ್ಯಗಳು ಕಣ್ಣಿಗೆ ಕಾಣುತ್ತಿವೆ. ನನ್ನ ಕೆಲಸಕ್ಕೆ ಜನ ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಯಾವುದೇ ಅಲೆ ಕೆಲಸ ಮಾಡುವುದಿಲ್ಲ ಎಂದರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಮಾಜಿ ಶಾಸಕ ಕೈಲಾಸನಾಥ ಪಾಟೀಲ್, ಮಾರುತಿರಾವ್ ಮಾಲೆ, ಮುಖಂಡರಾದ ಡಾ. ಭೀಮಾಶಂಕರ ಬಿಲಗುಂದಿ, ಚಂದ್ರಶೇಖರ ಸುಲ್ತಾನಪುರ ಇದ್ದರು. ಉತ್ತರ ಬ್ಲಾಕ್ ಅಧ್ಯಕ್ಷ ಮಹಮ್ಮದ ಅಜಗರ ಚುಲಬುಲ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

