'ಕಾಂಗ್ರೆಸ್ನ ಕಾರ್ಯಗಳು ಸ್ಮರಣೀಯ'
ಗುಲ್ಬರ್ಗ: ಕಳೆದ 5 ವರ್ಷಗಳಲ್ಲಿ ಗುಲ್ಬರ್ಗ ಮತಕ್ಷೇತ್ರದ ಸಂಸದನಾಗಿ ಕೇಂದ್ರ ಸಚಿವನಾಗಿ ಕ್ಷೇತ್ರಕ್ಕೆ , ಕರ್ನಾಟಕಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ತಮ್ಮ ಕಾರ್ಯಸಾಧನೆಗಳ ಬಗ್ಗೆ ಹೇಳಿದರು.
ಸರ್ಕಾರಿ ಹುದ್ದೆಗೆ ರಾಜಿನಾಮೆ ನೀಡಿ ಶರಣು ಸಲಗರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ವಿ.ಕೆ. ಸಲಗರ ಗ್ರಾಮದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದ ಸಂದರ್ಭದಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಕೇಂದ್ರದಲ್ಲಿ ಅನೇಕ ಜನಪರ ಕೆಲಸ ಮಾಡಿದೆ. ಸ್ವಾಸ್ಥ್ಯ ಬೀಮಾ ಯೋಜನೆ, ಕಾರ್ಮಿಕರಿಗಾಗಿ ದೇಶದಲ್ಲಿ ಅನೇಕ ಕಡೆ ಇಎಸ್ಐ ಆಸ್ಪತ್ರೆ, 371(ಜೆ) ಕಲಂ, ಸ್ಕಿಲ್ ಡೆವಲಪ್ಮೆಂಟ್ ತರಬೇತಿ ಕೇಂದ್ರ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆಂದರು.
ಪ್ರಭಾವಿತ: ಕಾಂಗ್ರೆಸ್ಗೆ ಸೇರ್ಪಡೆಯಾದ ಶರಣು ಸಲಗರ್ ಮಾತನಾಡಿ, ಖರ್ಗೆಯವರ ನಾಯಕತ್ವ, ಜನಪರ ಕಾಳಜಿ ಮತ್ತು ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತನಾಗಿ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೆನೆಂದರು. ಶಾಸಕ ಜಿ. ರಾಮಕೃಷ್ಣ, ಮಲ್ಲಿನಾಥ ಪಾಟೀಲ್ ಸೊಂತ, ಜಿಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಟಗಿ ಮಾತನಾಡಿದರು.
ಈ ಸಮಾರಂಭದಲ್ಲಿ ಡಿಸಿಸಿ ಬ್ಯಾಂಕ್ ಅದ್ಯಕ್ಷ ಸೋಮಶೇಖರ ಗೋನಾಯಕ, ಜಿಪಂ ಅಧ್ಯಕ್ಷ ರಮೇಶ ಮರಗೋಳ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

