ಬೇಡಿಕೆ ಈಡೇರಲು ಖರ್ಗೆ ದಿಲ್ಲಿಯಲ್ಲಿರಲಿ
ಗುಲ್ಬರ್ಗ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದ ಕೋಲಿ ಸಮಾಜವನ್ನು ಎಸ್ಟಿ ಪಂಗಡ ಸೇರ್ಪಡೆಗೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸುವಲ್ಲಿ ಶ್ರಮಿಸಿದ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮಾಜದ ಬಾಂಧವರು ಒಮ್ಮತದಿಂದ ಮತ ನೀಡಿ ಗೆಲ್ಲಿಸಿ ಮತ್ತೊಮ್ಮೆ ಲೋಕಸಭೆಗೆ ಕಳುಹಿಸಬೇಕೆಂದು ಗುರುವಾರ ನಡೆದ ಕೋಲಿ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಗುಲ್ಬರ್ಗ, ಬೀದರ್, ಯಾದಗಿರಿ ಜಿಲ್ಲೆಗಳ ಕೋಲಿ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಹಲವಾರು ಮುಖಂಡರು ಒಮ್ಮತ ಸೂಚಿಸಿದರು.
ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡಿ, ಕೋಲಿ ಸಮಾಜವನ್ನು ಎಸ್ಟಿ ಪಂಗಡಕ್ಕೆ ಸೇರ್ಪಡೆ ಮಾಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಇನ್ನು ಮುಂದೆ ಮಾಡುವಂತಿಲ್ಲ. ಸಮಾಜದಲ್ಲಿ ಹೊಸ ಅಧ್ಯಾಯವೊಂದು ಪ್ರಾರಂಭವಾಗಿದೆ. ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು ಇನ್ನೂ ಸ್ವಲ್ಪ ಕೆಲಸ ಬಾಕಿ ಉಳಿದಿದ್ದು, ಖರ್ಗೆ ಅವರನ್ನು ಆಯ್ಕೆ ಮಾಡಿದರೆ ಆ ಕೆಲಸವೂ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು. ಕೋಲಿ ಸಮಾಜದ ಮುಖಂಡ ತಿಪ್ಪಣ್ಣ ಕಮಕನೂರ, ಮಾನಪ್ಪ ಸುರಪುರ ಮಾತನಾಡಿದರು. ಸಮಾವೇಶದಲ್ಲಿ ಪಕ್ಷದ ಮುಖಂಡರಾದ ರವಿರಾಜು ಕೊರವಿ, ಭೀಮಣ್ಣ ಸಾಲಿ, ದೇವೀಂದ್ರಪ್ಪ ಮಾಡಿಯಾಳ, ಸಿದ್ದು ಬಾಣವಾರ, ಮಹಾಂತೇಶ ಪಾಟೀಲ್, ಝರಣಪ್ಪ ಚಿಂಚೋಳಿ, ಚಂದ್ರಪ್ಪ ಉಪ್ಪಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

