ಕಾಲುವೆ ನೀರಿಗಾಗಿ ಶಾಸಕರ ಗಡುವು
ಸುರಪುರ: ನಾರಾಯಣಪುರ ಎಡದಂಡೆ ಕಾಲುವೆಗೆ ಮಾ.31ರವರೆಗೆ ನೀರು ಹರಿಸದಿದ್ದರೆ ಜಿಲ್ಲಾಧಿಕಾರಿ ಕಾರ್ಯಾಲಯದ ಮುಂದೆ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ಗಡುವು ನೀಡಿದ್ದಾರೆ.
ಮಾರ್ಚ್ ಅಂತ್ಯದವರೆಗೂ ಕಾಲುವೆಗೆ ನೀರು ಹರಿಸಬೇಕು ಎಂದು ಅನೇಕ ಬಾರಿ ನಾರಾಯಣಪುರ ಕೆಬಿಜೆಎನ್ಎಲ್ ಮುಖ್ಯ ಇಂಜಿನಿಯರ್ ಅವರಿಗೆ ಹಾಗೂ ತಮಗೂ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದೆ. ಆದರೆ 22 ರಂದು ಸಂಜೆ ಏಕಾಏಕಿ ನೀರು ಬಂದ್ ಮಾಡಿ ರೈತರ ಬದುಕಿನೊಂದಿಗೆ ಚಕ್ಕಂದವಾಡುತ್ತಿರುವುದು ಸರಿಯಲ್ಲ. ಎಂದು ಶಾಸಕರು ಆಗ್ರಹಿಸಿದ್ದಾರೆ.
ಎಲ್ಲ ಪಕ್ಷಗಳ ಪ್ರತಿನಿಧಿಗಳು ನೀರಿನ ವಿಷಯದಲ್ಲಿ ರಾಜಕೀಯ ಮಾಡದೆ ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದಾರೆ. ಯಾವುದೇ ಒಂದು ಪಕ್ಷ, ಒಂದೇ ಜನಾಂಗದ ರೈತರಿಗೆ ನೀರು ಹರಿಸಿ ಎಂದು ಕೇಳುತ್ತಿಲ್ಲಾ ಮತ್ತು ಇದು ನೀತಿ ಸಂಹಿತೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಶಾಸಕರು ಹೇಳಿದ್ದಾರೆ. ನೀರು ನಿಲುಗಡೆಯಿಂದ ಸಾವಿರಾರು ರೈತರ ಬದುಕು ದುರ್ಭರವಾಗಿದೆ. ರೈತರ ಕೋಟ್ಯಂತರ ರೂಪಾಯಿ ಮೊತ್ತದ ಬೆಳೆ ನಷ್ಟವಾಗುತ್ತದೆ. ರೈತ ಕುಟುಂಬಗಳು ಅನಿವಾರ್ಯವಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ನೀರು ಹರಿಸುವಂತೆ ಕೋರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ. ಹಾಗಾಗಿ ತಕ್ಷಣ ಕಾಲುವೆಗೆ ನೀರು ಹರಿಸಬೇಕು ಎಂದು ತಿಳಿಸಿದ್ದಾರೆ.
ಮಂಗಳವಾರ ಸಂಜೆಯೊಳಗಾಗಿ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಿ ಬಡರೈತರನ್ನು ಸಂಕಷ್ಟದಿಂದ ಬಚಾವು ಮಾಡಬೇಕು. ಅವರ ಮೊಗದಲ್ಲಿ ಮಂದಹಾಸ ಮೂಡಲು ಕಾರಣೀಭೂತರಾಗಬೇಕು. ಇಲ್ಲವಾದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ.
ಇಂದು ಪುಟ್ಟರಾಜ ಗವಾಯಿಗಳ ಜನ್ಮ ಶತಮಾನೋತ್ಸವ
ಶಹಾಪುರ: ಸಗರನಾಡು ಸೇವಾ ಪ್ರತಿಷ್ಠಾನ ಹಾಗೂ ಪುಟ್ಟರಾಜ ಸೇವಾ ಸಮಿತಿ ಸಹಯೋಗದಲ್ಲಿ ಮಾ. 26ರಂದು ಭೀಮರಾಯನ ಗುಡಿಯ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಸಂಗೀತ ಪಾಠಶಾಲೆಯಲ್ಲಿ ಪುಟ್ಟರಾಜಗವಾಯಿಗಳ ಜನ್ಮ ಶತಮಾನೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಪುಟ್ಟರಾಜ ಸೇವಾ ಸಮಿತಿ ತಿಳಿಸಿದೆ. ಚರಬಸವೇಶ್ವರ ಸಂಸ್ಥಾನ ಗದ್ದುಗೆಯ ಬಸವಯ್ಯ ಶರಣರು ಸಾನ್ನಿಧ್ಯ ವಹಿಸಲಿದ್ದು ಅನೇಕ ಸಂಗೀತಗಾರರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

