ಗ್ರಾಮೀಣ ಮತದಾರರಲ್ಲಿದೆ ಬಲಿಷ್ಠ ದೇಶ ನಿರ್ಮಾಣ ಶಕ್ತಿ
ಕ.ಪ್ರ. ವಾರ್ತೆ ಜೇವರ್ಗಿ ಮಾ.25
ಮತ ಚಲಾವಣೆ ಪ್ರತಿಯೊಬ್ಬರ ಜನ್ಮ ಸಿದ್ಧ ಹಕ್ಕು. ಮತ ಚಲಾವಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಜಾಗೃತಿ ಮೂಡಿಸಬೇಕಾಗಿದೆ ಎಂದು ಜೇವರ್ಗಿ ತಾಲೂಕು ಸಹಾಯಕ ಚುನಾವಣಾಧಿಕಾರಿ ಜಿಯಾವುಲ್ಲಾ ಹೇಳಿದರು.
ಪಟ್ಟಣದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನದಲ್ಲಿ ಭಾಗವಹಿಸುವ ಕುರಿತು ಶಿಕ್ಷಣ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮತದಾನದ ಪ್ರಮಾಣ ಹೆಚ್ಚಿಸಲು ಹಾಗೂ ಮತದಾನದ ಮಹತ್ವ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಲು ಕ್ಯೆಗೊಳ್ಳಬೇಕಾದ ಅವಶ್ಯಕ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ವಿವರಿಸಿದರು.
ಮತದಾನ ಪವಿತ್ರವಾದ ಕಾರ್ಯ. ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗಿಯಾಗುವುದರ ಮೂಲಕ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಸುಭದ್ರ ಪ್ರಜಾಪ್ರಭುತ್ವಕ್ಕೆ ನಿಮ್ಮ ಮತ ನಿಮ್ಮ ಹಕ್ಕು, ನಿಮ್ಮ ದನಿ ಘೋಷಣೆಗಳನ್ನು ಕೂಗುತ್ತಾ ಪ್ರಭಾತಪೇರಿ ನಡೆಸುವ ಮೂಲಕ ಜಾಗೃತಿ ಮೂಡಿಸಬೇಕು.
ಈ ಕಾರ್ಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಜಾಥಾದಲ್ಲಿ ಭಾಗವಹಿಸಿ ಜಾಗೃತಿ ಅಭಿಯಾನ ನಡೆಸಬೇಕು ಎಂದರು.
ತಾಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನದ ಜಾಗೃತಿ ನಡೆಸುವಂತೆ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಮಾ. 26, ಏ. 2, ಏ. 8 ಮತ್ತು ಏ. 14ರಂದು ಬೆಳಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ಈ ಕಾರ್ಯಕ್ರಮವನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಹಸಿಲ್ದಾರ್ ಎಂ.ಎನ್.ಚೋರಗಸ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲಾನರಸಿಂಹರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಜರ್ ಹುಸೇನ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಮಾಧ್ಯಮ ಪ್ರಮಾಣೀಕರಣ, ಕಣ್ಗಾವಲು ಸಮಿತಿ ರಚಿಸಿ ಡಿಸಿ ಆದೇಶ
ಗುಲ್ಬರ್ಗ: ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಚುನಾವಣಾ ಜಾಹೀರಾತುಗಳ ಪ್ರಮಾಣೀಕರಣ ಹಾಗೂ ಇತರೆ ಮಾಧ್ಯಮ ಸಂಬಂಧದ ಕರ್ತವ್ಯ ನಿರ್ವಹಣೆಗೆ ಗುಲ್ಬರ್ಗ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ (district level media certification and monitoring committee) ರಚಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾಧಿಕಾರಿಗಳು ಸಮಿತಿಯ ಅಧ್ಯಕ್ಷರಾಗಿದ್ದಾರೆ. ಜಿಪಂ. ಸಿಇಒ ಹಾಗೂ ಗುಲ್ಬರ್ಗ ಸಹಾಯಕ ಆಯುಕ್ತರು ಸದಸ್ಯರಾಗಿದ್ದು, ವಾರ್ತಾ ಇಲಾಖೆಯ ಉಪನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ಎಚ್‌ಕೆಆರ್‌ಡಿಬಿ ಜಂಟಿ ನಿರ್ದೇಶಕರಾದ ಪ್ರವೀಣ ಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಹೊನ್ನಲಿಂಗಪ್ಪ, ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕ ಎಂ.ಬಿ. ಪಾಟೀಲ್ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಸಾಂಖ್ಯಿಕ ಅಧಿಕಾರಿ ಹಸನ್ ಪಟೇಲ್ ಬಿರಾದಾರ ಅವರು ಸಂಯೋಜಕರಾಗಿ ಕಾರ್ಯನಿರ್ವಹಿಸುವರು.
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲ ಅಭ್ಯರ್ಥಿಗಳು, ವಿವಿಧ ರಾಜಕೀಯ ಪಕ್ಷದವರು, ಅಭ್ಯರ್ಥಿಗಳ ಬೆಂಬಲಿಗರು, ಅಭ್ಯರ್ಥಿಗಳ ಅನುಮತಿ ಪಡೆದು ಮಾಧ್ಯಮ, ಪತ್ರಿಕೆಗಳ ಮೂಲಕ ಹಣ ಸಂದಾಯ ಮಾಡಿ ಜಾಹೀರಾತುಗಳನ್ನು ನೀಡಬೇಕಾದಲ್ಲಿ ಸಮಿತಿಗೆ ಅರ್ಜಿ ಸಲ್ಲಿಸಿ ಸಮಿತಿಯಿಂದ ಅನುಮೋದನೆಯಾದ ನಂತರವೇ ಬಹಿರಂಗ ಪ್ರಚಾರಪಡಿಸಬಹುದಾಗಿದೆ ಎಂದು ಪ್ರಸಾದ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

