ಬಿಎಸ್ಆರ್ ಕಾಂಗ್ರೆಸ್ ಮುಖಂಡರು ಬಿಜೆಪಿಗೆ
ಶಹಾಪುರ: ಬಿಜೆಪಿಯ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ ಹಾಗೂ ಮಾಜಿ ಸಚಿವರಾಜುಗೌಡರ ಸಮ್ಮುಖದಲ್ಲಿ ಬಿಎಸ್ಆರ್ ಕಾಂಗ್ರೆಸ್ ಮುಖಂಡರಾದ ಆರ್. ಚನ್ನಬಸ್ಸು ವನದುರ್ಗ ಅವರ ನೇತೃತ್ವದಲ್ಲಿ ನೂರಾರು ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಸಚಿವರಾದ ರಾಜುಗೌಡ ಮಾತನಾಡುತ್ತ, ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಒಂದೊಂದು ಮತವೂ ಅಮೂಲ್ಯವಾಗಿದೆ. ಅದ್ದರಿಂದ ಎಲ್ಲಾ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಮತದಾರರ ಮನವೊಲಿಸಿ ಶಿವನಗೌಡ ನಾಯಕರನ್ನು ಬಹುಮತದಿಂದ ಆಯ್ಕೆ ಮಾಡಬೇಕೆಂದು ಕರೆ ನೀಡಿದರು. ಚನ್ನಬಸ್ಸು ಮಾತನಾಡಿದರು. ಬಿಎಸ್ಆರ್ ಮುಖಂಡರಾದ ಲಿಂಗಣ್ಣ ಸಾಹು ಮದ್ರಿಕಿ, ಚಂದ್ರು ಯಾಳಗಿ, ಭೀಮಣ್ಣ ಸುಂಗಲ್ಕರ, ಪದ್ಮಣ್ಣ ಹೈಯಾಳ, ದೇವಿಂದ್ರಣ್ಣ ಗಂಗನಾಳ ಸೇರಿದಂತೆ ನೂರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಅಧ್ಯಕ್ಷ ವೀರನಗೌಡ ಮಲ್ಲಬಾದಿ, ದೇವಿಂದ್ರನಾಥ ನಾದ್, ನೀಲಕಂಠರಾಯ ಎಲೇರಿ, ಲಿಂಗಪ್ಪ ಹತ್ತಿಮನಿ, ದಾಸಪ್ಪ ಖಂಡನ್, ಮಲ್ಲಿಕಾರ್ಜುನ ಚಿಲ್ಲಾಳ, ಯಲ್ಲಯ್ಯನಾಯಕ ವನದುರ್ಗ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

