ಗುಲ್ಬರ್ಗಾ

ಸಂಹಿತೆ ಉಲ್ಲಂಘನೆ: ಕೇಬಲ್ ಆಪರೇಟರ್ ವಿರುದ್ಧ ಎಫ್‌ಐಆರ್

Published On :

ಗುಲ್ಗರ್ಗ: ಲೋಕಸಭಾ ಚುನಾವಣೆ ಪ್ರಯುಕ್ತ ಅಫಜಲ್ಪುರ ಪಟ್ಟಣದಲ್ಲಿ ಪೂರ್ವಾನುಮತಿ ಪಡೆಯದೆ ಕಾಂಗ್ರೆಸ್ ಅಭ್ಯರ್ಥಿಯ ವೀಡಿಯೋ ಪ್ರದರ್ಶಿಸಿದ್ದಕ್ಕಾಗಿ ಸ್ಥಳೀಯ ಕೇಬಲ್ ಆಪರೇಟರ್ ವಿರುದ್ಧ ಮಾ.24 ರಂದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಎಫ್‌ಐಆರ್ ದೂರು ದಾಖಲಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ಮಾ.25 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಒಟ್ಟು 48 ಪ್ರಕರಣಗಳನ್ನು ದಾಖಲಿಸಿ 645.08 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 43 ಜನರ ವಿರುದ್ಧ ಎಫ್‌ಐಆರ್ ದೂರು ದಾಖಲಿಸಲಾಗಿದೆ. ಮಾ.25ರಂದು ಅಬಕಾರಿ ಇಲಾಖೆಯಿಂದ ಎರಡು ಪ್ರಕರಣ ದಾಖಲಿಸಿ 29.49 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈವರೆಗೆ ದಾಖಲಿಸಿದ ಒಟ್ಟು 48 ಪ್ರಕರಣಗಳಲ್ಲಿ ಅಬಕಾರಿ ಇಲಾಖೆಯಿಂದ ದಾಖಲಿಸಿದ 36 ಪ್ರಕರಣಗಳಿಂದ 440.80 ಲೀಟರ್ ಮದ್ಯ ಹಾಗೂ 3.60 ಕೆಜಿ ಗಾಂಜಾ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ಹಾಗೂ ಪೊಲೀಸ್ ಇಲಾಖೆಯಿಂದ ದಾಖಲಿಸಿದ 12 ಪ್ರಕರಣಗಳಿಂದ 204.28 ಲೀಟರ್ ಮದ್ಯ ಹಾಗೂ 1.5 ಕೆಜಿ ಸಿಎಚ್ ಪೌಡರ್ ವಶಪಡಿಸಿಕೊಳ್ಳಲಾಗಿದೆ.

ಮತದಾರರ ಜಾಗೃತಿ ಜಾಥಾ
ಶಹಾಬಾದ್: ಮುಂಬರುವ ಲೋಕಸಭಾ ಚುನಾವಣೆಯ ನಿಮಿತ್ತ ಚುನಾವಣಾ ಆಯೋಗದ ನಿರ್ದೇಶನದಂತೆ ನಗರ ಸಭೆಯ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಮತದಾರರ ಜಾಗೃತಿ ಜಾಥಾವನ್ನು ಮಂಗಳವಾರ ನಡೆಸಲಾಯಿತು.
ನಗರಸಭೆ ಪೌರಾಯುಕ್ತ ಕೆ. ಗುರುಲಿಂಗಪ್ಪರವರು ಜಾಥಾವನ್ನು ಉದ್ಘಾಟಿಸಿದರು. ಎಇಇ ಶರಣ ಪೂಜಾರಿ ಉಪಸ್ಥಿತರಿದ್ದರು. ಬ್ಯಾನರ್, ಫಲಕ, ವಾದ್ಯದೊಂದಿಗೆ ನಗರಸಭೆಯ ಕಿರಿಯ ಅಭಿಯಂತರರು, ನೈರ್ಮಲ್ಯ ನಿರೀಕ್ಷಕರು, ನಗರಸಭೆ ಸಿಬ್ಬಂದಿ ಸುಮಾರು 60 ಸ್ತ್ರೀ ಶಕ್ತಿ ಗುಂಪುಗಳ ಮಹಿಳೆಯರು ಜಾಥಾದಲ್ಲಿ ಪಾಲ್ಗೊಂಡು ಘೋಷಣೆ ಕೂಗುತ್ತ, ನಗರದ ಪ್ರಮುಖ
ಬೀದಿಗಳಲ್ಲಿ, ವಿವಿಧ ವಾರ್ಡ್‌ಗಳಲ್ಲಿ ಜಾಥಾ ನಡೆಸಿ, ಮತದಾನದ ಕುರಿತು ಜನ ಜಾಗೃತಿ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.