ಮನೆ ಬಾಗಿಲಿಗೆ ಕಾನೂನು ಅರಿವು-ನೆರವು
ಗುಲ್ಬರ್ಗ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನ ಮತ್ತು ಆದೇಶದಂತೆ ಜನಸಾಮಾನ್ಯರ ಮನೆ ಬಾಗಿಲಿಗೆ ಕಾನೂನಿನ ಅರಿವು ಮೂಡಿಸಲು ರಾಷ್ಟ್ರಾದ್ಯಂತ (5 ಸಾವಿರದಿಂದ 10 ಸಾವಿರ ಹಾಗೂ 10 ಸಾವಿರ ಕ್ಕಿಂತ ಹೆಚ್ಚು ಜನಸಂಖ್ಯೆಯುಳ್ಳ ಗ್ರಾಮಗಳಲ್ಲಿ)ಗ್ರಾಮೀಣ ಕಾನೂನು ನೆರವು ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಗುಲ್ಬರ್ಗ ಜಿಲ್ಲೆಯ ಎಲ್ಲಾ ತಾಲೂಕಗಳಲ್ಲಿಯೂ ಇಂತಹ ಕಾನೂನು ನೆರವು ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ಆರ್. ವೆಂಕಟಸುದರ್ಶನ್ ಹೇಳಿದರು.
ತಾಲೂಕಿನ ಫರಹತಾಬಾದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಮೀಣ ಕಾನೂನು ನೆರವು ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ:ಕೇಂದ್ರಕ್ಕೆ ನಿಯೋಜಿಸಲಾಗುವ ಸಮರ್ಥ ವಕೀಲರು ಗ್ರಾಮೀಣ ಜನರಿಗೆ ಸಮಯೋಚಿತ ಉಚಿತ ಕಾನೂನು ನೆರವು ಮತ್ತು ಸಲಹೆ ನೀಡಲಿದ್ದು, ಇದಕ್ಕಾಗಿ ಜನರು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ ಎಂದರು.
ಮಹಿಳೆಯರು, ಮಕ್ಕಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಕಸ್ಟಡಿಯಲ್ಲಿರುವವರು, ವಿಕಲಚೇತನರು, ಕಾರ್ಮಿಕರು, ಪ್ರಕೃತಿ ವಿಕೋಪಕ್ಕೆ ಒಳಪಟ್ಟವರು ಉಚಿತ ಕಾನೂನು ನೆರವು ಪಡೆಯಬಹುದಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಸಣ್ಣ ಪುಟ್ಟ ಸಮಸ್ಯೆಗಳ ಬಗ್ಗೆ ಈ ಕಾನೂನು ನೆರವು ಕೇಂದ್ರಕ್ಕೆ ಭೇಟಿ ನೀಡಿ ಚರ್ಚಿಸಬಹುದು. ಫರಹತಾಬಾದ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಈ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ತಾಪಂ. ಸಿಇಒ ವಿಜೇಂದ್ರ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಕೆ ಯುಸೂಫ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ. ವಿಜಯನ್, ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂದೀಪ್ ಜಿಂದೆ, ಉಪ ತಹಸೀಲ್ದಾರ್ ಅಮೀತ ಕುಲಕರ್ಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

