ಮೂಲ ಸೌಲಭ್ಯಕ್ಕೆ ಕರವೇ ಆಗ್ರಹ
ಚಿತ್ತಾಪುರ: ತಾಲೂಕಿನ ಭೀಮನಹಳ್ಳಿ ಗ್ರಾಪಂ. ವ್ಯಾಪ್ತಿಯ ಗ್ರಾಮಗಳಾದ ಭೀಮನಹಳ್ಳಿ, ಡೋಣಗಾಂವ, ರಾಜೋಳದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಜನರು ರೋಗಕ್ಕೆ ತುತ್ತಾಗುವ ಭೀತಿಯಲ್ಲಿದ್ದಾರೆ ಎಂದು ಕರವೇ ವಲಯ ಘಟಕ ಅಧ್ಯಕ್ಷ ಭಾಸ್ಕರ ಕರಿಚಕ್ರ ಅರೋಪಿಸಿದ್ದಾರೆ.
2008-13ನೇ ಸಾಲಿನವರೆಗೆ ಕ್ರಿಯಾಯೋಜನೆ ಪಟ್ಟಿಯ ಅನುಗುಣವಾಗಿ ಹಂಚಿಕೆ ಮಾಡಿರುವ ಕಾಮಗಾರಿಗಳಲ್ಲಿ ಸಂಪೂರ್ಣ ಅವ್ಯವಹಾರವಾಗಿದೆ. ರಾಷ್ಟ್ರೀಯ ಉದ್ಯೋಗ ಖಾತ್ರಿ ಕೆಲಸಗಳು ಮಾಡದೇ ಎನ್ಎಂಅರ್ ತೆಗೆಸಿ ಬಿಲ್ಗಳನ್ನು ಎತ್ತಿ ಹಾಕಿ ನಿಜವಾದ ಕೂಲಿಕಾರರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಗ್ರಾಮಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಸಿಸಿ ರಸ್ತೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳಿಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ.
ಗ್ರಾಪಂ ವ್ಯಾಪ್ತಿಯಲ್ಲಿ 2008ರಿಂದ 2013ನೇ ಸಾಲಿನವರೆಗಿನ 74 ಎಂಐಎಸ್ ಕಾಮಗಾರಿಗಳ ಬಿಲ್ಗಳನ್ನು ಪಾವತಿಸಬಾರದು. ಈ ಕಾಮಗಾರಿಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು. ಕಾಮಗಾರಿ ಮುಗಿದ ಮೇಲೆ ಬಿಲ್ ಪಾವತಿ ಮಾಡಬೇಕು. ಅಲ್ಲಿಯವರೆಗೆ ಇದಕ್ಕೆ ಸಂಬಂಧಿಸಿದ ಯಾವದೇ ಬಿಲ್ ಮಂಜೂರು ಮಾಡಬಾರದೆಂದು ಒತ್ತಾಯಿಸಿದರು.
ಗ್ರಾಪಂ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದಲ್ಲಿ ಇದರ ವಿರುದ್ಧ ಉಗ್ರ ಸ್ವರೂಪದ ಹೋರಾಟ ಮಾಡಿ ಗ್ರಾಪಂಗೆ ಬೀಗ ಮುದ್ರೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕರಿಚಕ್ರ ಎಚ್ಚರಿಕೆ ನೀಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಚಿಂಚೋಳಿ: ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿಸಲ್ಲಿಸುವ ದಿನಾಂಕವನ್ನು ಏಪ್ರಿಲ್ 21ರವರೆಗೆ ವಿಸ್ತರಿಸಲಾಗಿದೆ ಎಂದು ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹ್ಮದ ರಫಿ ಶಕಾಳೆ ತಿಳಿಸಿದ್ದಾರೆ.
ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ 10 ಮತ್ತು ಸಹಾಯಕಿಯರ 16, ಒಟ್ಟು 26 ಹುದ್ದೆಗಳಿಗೆ ಅರ್ಜಿ ಸ್ವೀಕರಿಸಲು ಮಾ. 26 ಕೊನೆಯ ದಿನವಾಗಿತ್ತು. ಆದರೆ ಜಿಪಂ. ಸಿಇಒ ಆದೇಶದಂತೆ ಏ. 21ರ ಸಾಯಂಕಾಲ 5 ಗಂಟೆವರೆಗೆ ಈ ಅವಧಿಯನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ದೂರವಾಣಿ ಸಂಖ್ಯೆ 08475-273317ಗೆ ಸಂಪರ್ಕಿಸುವಂತೆ ಯೋಜನಾಧಿಕಾರಿ ಮಹ್ಮದ ರಫಿ ಶಕಾಳೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

