ಗುಲ್ಬರ್ಗಾ

ಎಸ್ಸೆಸ್ಸೆಲ್ಸಿ ಪರೀಕ್ಷೆ ಸೂಸೂತ್ರ

Published On :

ಯಾದಗಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನ ಪ್ರಥಮ ಭಾಷೆಯಾದ ಕನ್ನಡ, ಹಿಂದಿ ಹಾಗೂ ಇನ್ನಿತರ ಭಾಷೆಗಳ ಪರೀಕ್ಷೆಗೆ ಸುಮಾರು 10,388 ವಿದ್ಯಾರ್ಥಿಗಳ ಪೈಕಿ 10,003 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 379 ವಿದ್ಯಾರ್ಥಿಗಳು  ಪರೀಕ್ಷೆಗೆ ಗೈರುಹಾಜರಾಗಿದ್ದರು ಎಂದು ಡಿಡಿಪಿಐ ನಾಸಿರುದ್ದೀನ್ ತಿಳಿಸಿದ್ದಾರೆ.
ಸುರಪುರ ವರದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರ ತಾಲೂಕಿನಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾಗಿವೆ. ತಾಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3,472 ವಿದ್ಯಾರ್ಥಿಗಳ ಪೈಕಿ 3360 ವಿದ್ಯಾರ್ಥಿಗಳು ಕನ್ನಡ ಭಾಷೆ ಪರೀಕ್ಷೆ ಬರೆದರು. ಉಳಿದಂತೆ 112 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.  
ಹುಣಸಗಿ ವರದಿ: ಪಟ್ಟಣದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಂಡವು. ಯುಕೆಪಿ ಕ್ಯಾಂಪಿನ ಸರ್ಕಾರಿ ಪಿಯು ಕಾಲೇಜಿನ ಕೇಂದ್ರದಲ್ಲಿ ಒಟ್ಟು 296 ಪರೀಕ್ಷಾರ್ಥಿಗಳಲ್ಲಿ 288 ವಿದ್ಯಾರ್ಥಿಗಳು ಹಾಜರಿದ್ದರೆ 14 ಜನರು ಗೈರಾಗಿದ್ದರು ಎಂದು ಪರೀಕ್ಷಾ ಅಧಿಕಾರಿ ಅಮೀನಸಾ ತಿಳಿಸಿದ್ದಾರೆ.
ಗುರುಮಠಕಲ್ ವರದಿ: ನಗರದ ಸರ್ಕಾರಿ ಬಾಲಕ ಮತ್ತು ಬಾಲಕಿಯರ ಪ್ರೌಢಶಾಲೆಗಳಲ್ಲಿ ಶುಕ್ರವಾರ 577 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದರು. ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಒಟ್ಟು 282 ವಿದ್ಯಾರ್ಥಿಗಳಲ್ಲಿ 276 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 11 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಒಟ್ಟು 290 ವಿದ್ಯಾರ್ಥಿಗಳ ಪೈಕಿ 281 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, 9 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಶಹಾಪುರ ವರದಿ: ತಾಲೂಕಿನಾದ್ಯಂತ 11 ಕೇಂದ್ರಗಳಲ್ಲಿ ಒಟ್ಟು 2,863 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರಿಕ್ಷೆ ಬರೆದರು. 72 ವಿದ್ಯಾರ್ಥಿಗಳು ಪರಿಕ್ಷೆಗೆ ಹಾಜರಾಗಿರಲಿಲ್ಲ.
ನೋಂದಣಿ ಸಂಖ್ಯೆ ಅಳಿಸಿದ ಕಿಡಿಗೇಡಿಗಳು: ಗೋಗಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಕೆಲವು ಕಿಡಿಗೇಡಿಗಳು ಬೀಗ ಮುರಿದು ಪರೀಕ್ಷೆಯ ಹಿಂದಿನ ದಿನ ನಮೂದಿಸಲಾಗಿದ್ದ ನೋಂದಣಿ ಸಂಖ್ಯೆಗಳನ್ನು ಅಸ್ತವ್ಯಸ್ತ ಮಾಡುವ ಮೂಲಕ ಸುಸೂತ್ರವಾಗಿ ನಡೆಯಬೇಕಿದ್ದ ಪರೀಕ್ಷೆಗಳಿಗೆ ಸ್ವಲ್ಪ ಅಡಚಣೆ ಮಾಡಿದ ಘಟನೆ ನಡೆದಿದೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುವುದರ ಜತೆಗೆ ಕಿಡಿಗೇಡಿಗಳ ಪತ್ತೆಗೂ ಗಮನಹರಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬನೇ ವಿದ್ಯಾರ್ಥಿ
ಸುರಪುರ: ಪಟ್ಟಣದ ನಾಲ್ಕು ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆಯುತ್ತ್ತಿದ್ದು, ಈ ಪೈಕಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಹಿಂದಿ ಪರೀಕ್ಷೆಯಲ್ಲಿ ಒಬ್ಬನೇ ವಿದ್ಯಾರ್ಥಿ ಪರೀಕ್ಷೆ ಬರೆದದ್ದು ಅಚ್ಚರಿ ವಿಷಯವಾಗಿತ್ತು.  
ಒಟ್ಟು ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು.  ಆ ಪೈಕಿ ಒಬ್ಬ ವಿದ್ಯಾರ್ಥಿ ಗೈರಾಗಿದ್ದರಿಂದ ಒಬ್ಬನೇ ವಿದ್ಯಾರ್ಥಿ ಪರೀಕ್ಷೆ ಬರೆದ. ಇದಕ್ಕಾಗಿ 13 ಸಿಬ್ಬಂದಿ ಕೆಲಸ ಮಾಡಬೇಕಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.