ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಕ್ಕಳ ಬಳಕೆ!
ಗುರಮಠಕಲ್: ಗುಲ್ಬರ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಯವರ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಚಿಹ್ನೆಯುಳ್ಳ ಬಟ್ಟೆಯನ್ನು ಮಕ್ಕಳ ತಲೆಗೆ ಸುತ್ತಿ ಬಳಸಿಕೊಂಡದ್ದು ಕಂಡು ಬಂತು.
ಶನಿವಾರ ಗುರುಮಠಕಲ್ ಮತಕ್ಷೇತ್ರದ ಕೊಂಕಲ್ ಗ್ರಾಮದಲ್ಲಿ ಚುನಾವಣೆಯ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಸ್ಥಳಿಯ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆಯಿಸಿದ್ದರು. ಆ ಮೂಲಕವಾಗಿ ಅವರ ತಲೆಗೆ ಹಾಗೂ ಕೈಯಲ್ಲಿ ಪಕ್ಷದ ಧ್ವಜ ನೀಡಿ ಚುನಾವಣೆಯ ಪ್ರಚಾರರಕ್ಕೆ ಕರೆಯಿಸಿರುವುದು ಸ್ಪಷ್ಟವಾಗಿ ಕಾಣಸಿಗುತ್ತಿತ್ತು. ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಮಾಡಬೇಕಾದ ಅಧಿಕಾರಿಗಳು ಮಾತ್ರ ನಾಪತ್ತೆಯಾಗಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆಯಗಲು ಪ್ರಮುಖ ಕಾರಣವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಾಬೂರಾವ್ ಚಿಂಚನಸೂರ, ಗುಲ್ಬರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಾಗನಗೌಡ ಪಾಟೀಲ್ ಸಂಕನೂರ ಸೇರಿದಂತೆ ಪಕ್ಷದ ಪ್ರಮುಖರೆಲ್ಲರೂ ಇದಕ್ಕೆ ಸಾಕ್ಷಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

