ಬಸವೇಶ್ವರ ಮೂರ್ತಿ ಆವರಣ ಅಭಿವೃದ್ಧಿಗೆ ಹಣ ಬಿಡುಗಡೆ
ಗುಲ್ಬರ್ಗ: ನಗರದ ಜಗತ್ ವೃತ್ತದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಆವರಣದಲ್ಲಿ ಉದ್ಯಾನವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ ಪಾಲಿಕೆಯಿಂದ ಹಣ ಬಿಡುಗಡೆಯಾಗಿದೆ. ಇದು, ಜೈ ಕನ್ನಡಿಗರ ರಕ್ಷಣಾ ವೇದಿಕೆ ಹೊರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಚಿನ ಫರತಾಬಾದ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಬಸವೇಶ್ವರರ ಪುತ್ಥಳಿ ಆವರಣದಲ್ಲಿ ಉದ್ಯಾನವನದ ಅಭಿವೃದ್ಧಿ, ಸುತ್ತಲೂ ಕಾಂಪೌಂಡ್ ನಿರ್ಮಾಣಕ್ಕಾಗಿ ಅನೇಕ ಹೋರಾಟಗಳನ್ನು ಮಾಡುತ್ತಾ ಬರಲಾಗಿದೆ.
ಅಭಿವೃದ್ಧಿಗಾಗಿ ಆಗ್ರಹಿಸಿ ಪಾಲಿಕೆ ಎದುರು ಧರಣಿ ಸತ್ಯಾಗ್ರಹ, ಪ್ರತಿಭಟನೆ ಸೇರಿದಂತೆ ಅನೇಕ ರೀತಿಯ ಹೋರಾಟಗಳನ್ನು ಮಾಡಲಾಗಿತ್ತು. ಅಧಿಕಾರಿಗಳು ಕೇವಲ ಭರವಸೆಗಳನ್ನು ನೀಡುತ್ತಾ ಬಂದಿದ್ದರು.
ಕಳೆದ ಏ.24ರಂದು ನಡೆಸಿದ ಹೋರಾಟಕ್ಕೆ ಮಣಿದ ಪಾಲಿಕೆ ಬಸವೇಶ್ವರ ಪುತ್ಥಳಿ ಆವರಣದ ಅಭಿವೃದ್ಧಿಗೆ 2,46,000 ಮೀಸಲಿಡಲಾಗಿದೆ ಎಂದು ಪಾಲಿಕೆ ಆಯುಕ್ತರು ಲಿಖಿತ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಉಪಾಧ್ಯಕ್ಷ ಅಣವೀರ ಪಾಟೀಲ, ಪ್ರ. ಕಾರ್ಯದರ್ಶಿ ಕಾಶಿನಾಥ ಮಾಳಗಿ, ಸಹ ಕಾರ್ಯದರ್ಶಿ ಬಾಬುರಾವ ಚಿಂಚನಸೂರ, ಶರಣು ಪೂಜಾರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

