ಗುಲ್ಬರ್ಗಾ

ಅಗೌರವ: ಜೈಕರವೇ ಆಕ್ರೋಶ

Published On :

ಅಫಜಲ್ಪುರ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಸವೇಶ್ವರರ ಜಯಂತಿ ಆಚರಿಸದೆ ಅಗೌರವ ತೋರಿದ್ದಾರೆ ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕ ಅಧ್ಯಕ್ಷ ಸುರೇಶ ಅವಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿನ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿದಾಗ ಬೀಗ ಹಾಕಲಾಗಿತ್ತು. ಅಲ್ಲದೆ ತಾಲೂಕು ಆಡಳಿತ ಕೂಡ ಪೂರ್ವಭಾವಿ ಸಭೆ ಮಾಡದೇ ಮನಸ್ಸಿಗೆ ಬಂದಂತೆ ಕಾಟಾಚಾರಕ್ಕೆ  ಬಸವ ಜಯಂತಿ ಆಚರಣೆ ಮಾಡುತ್ತಿದೆ ಎಂದು ಅವರು ದೂರಿದ್ದಾರೆ. ಡಾ. ಬಾಬು ಜಗಜೀವನರಾಮ್, ಡಾ. ಅಂಬೇಡ್ಕರ್ ಸೇರಿದಂತೆ ಇತರೆ ಮಹಾಪುರುಷರ ಜಯಂತಿ ಹಾಗೂ ಶುಕ್ರವಾರ ನಡೆದ ಬಸವೇಶ್ವರರ ಜಯಂತಿ ಸಂದರ್ಭದಲ್ಲಿ ಕೆಲವೇ ಅಧಿಕಾರಿಗಳು ಭಾಗವಹಿಸಿದ್ದರೆಂದು ಆವಟೆ ಆರೋಪಿಸಿದ್ದಾರೆ. ಜಯಂತಿ ಆಚರಣೆ ಮಾಡದ ಹಾಗೂ ಗೈರುಹಾಜರಾದ ಅಧಿಕಾರಿಗಳ ವಿರುದ್ಧ ತಾಲೂಕು ಆಡಳಿತ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.