ಚಿಂಚೋಳಿ: ಕೃಷಿ ಕೂಲಿಕಾರರ ಧರಣಿ
ಚಿಂಚೋಳಿ: ತಾಲೂಕಿನ ರೈತರಿಗೆ ಬೆಳೆ ಸಾಲ ಮತ್ತು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಹಾಗೂ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸಾಲ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಮುಖಂಡರು ಪಟ್ಟಣದ ಎಸ್ಬಿಐ ಎದುರು ಸೋಮವಾರ ಧರಣಿ ಸತ್ಯಾಗ್ರಹ ನಡೆಸಿ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಭೀಮಶೆಟ್ಟಿ ಎಂಪಳ್ಳಿ ಧರಣಿಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನ ರೈತರಿಗೆ ಬ್ಯಾಂಕಿನಿಂದ ಸರಳವಾಗಿ ಸಾಲ ನೀಡಬೇಕು. ಕಳೆದೆರಡು ವರ್ಷಗಳ ಹಿಂದೆ ಬ್ಯಾಂಕಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ 50 ರೈತರಿಗೆ ಸಾಲ ಕೊಡಬೇಕಾಗಿತ್ತು. ಆದರೆ ಈವರೆಗೆ ನೀಡದ ಕಾರಣ ರೈತರು ಸಾಲಕ್ಕಾಗಿ ಬ್ಯಾಂಕಿಗೆ ಅಲೆದಾಡಬೇಕಾಗಿದೆ. ಪ್ರತಿ ಎಕರೆಗೆ 1 ಲಕ್ಷ ಬೆಳೆ ಸಾಲ ಮತ್ತು ಕೃಷಿಗೆ 50 ಸಾವಿರ ಸಾಲ ನೀಡಬೇಕೆಂದು ಒತ್ತಾಯಿಸಿದರು. ತಾಲೂಕು ಹಿರಿಯ ಮುಖಂಡರಾದ ಗೋಪಾಲರಾವ ಕಟ್ಟಿಮನಿ ಮಾತನಾಡಿದರು. ಉಪಾಧ್ಯಕ್ಷ ಪ್ರಭು ರಾಮಚಂದ್ರ ಎಂಪಳ್ಳಿ, ಸಿದ್ದಪ್ಪ ಭೂತಾಳಿ, ಸುರೇಶ ಬಳಂಕರ್, ಸೈಯದ ನಿಯಾಜ ಅಲಿ, ಕುಪೇಂದ್ರ ಐನೋಳಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

