ಗುಲ್ಬರ್ಗಾ

ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ

Published On :

ಗುಲ್ಬರ್ಗ: ಬಸ್ ಪ್ರಯಾಣ ದರ ಇಳಿಸಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಎಸ್‌ಡಿಪಿಐ ಗುರವಾರ ಕೇಂದ್ರ ಬಸ್‌ನಿಲ್ದಾಣದ ಎದುರು ಪ್ರತಿಭಟನೆ ನಡೆಸಿತು.
ರಾಜ್ಯ ಸರ್ಕಾರ ಅಧೀನದಲ್ಲಿರುವ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರಗಳನ್ನು ತರಾತುರಿಯಲ್ಲಿ ಏರಿಸಲಾಗಿದೆ. ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರಗಳ ಕರ್ತವ್ಯವಾಗಿದೆ. ಆದರೆ ಹಿಂದಿನ ಬಿಜೆಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರ ನಗರ ಮತ್ತು ಗ್ರಾಮೀಣ ಬಸ್ ಪ್ರಯಾಣದರ ಹೆಚ್ಚಿಸಿರುವುದು ಖಂಡನೀಯ.
ಸಂಸ್ಥೆಗೆ ಉಂಟಾಗಿರುವ ಆರ್ಥಿಕ ಹೊರೆ ಸರಿದೂಗಿಸಲು ಪ್ರಯಾಣ ದರದಲ್ಲಿ ಸರಾಸರಿ ಶೇ.8 ಹೆಚ್ಚಳ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಇದರ ಹಿಂದೆ ಖಾಸಗಿ ಬಸ್ಸು ಮಾಲೀಕರ ಲಾಬಿ ಕಂಡುಬರುತ್ತಿದೆ.
ರಾಜ್ಯ ಸರ್ಕಾರ ತರಾತುರಿಯಲ್ಲಿ ಏರಿಸಿರುವ ದರವನ್ನು ಕೂಡಲೇ ಇಳಿಸಬೇಕು. ಸಂಸ್ಥೆಯನ್ನು ಲಾಭದಲ್ಲಿ ನಡೆಸುವಂತೆ ಶುದ್ಧ ಹಸ್ತರನ್ನು ನೇಮಿಸಬೇಕು. ಸರ್ಕಾರಿ ಬಸ್ಸುಗಳು ಇಲ್ಲದ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರಿ ಬಸ್ ಸೇವೆ ಆರಂಭಿಸಬೇಕು.
  ವಿದ್ಯಾರ್ಥಿಗಳಿಗೆ ಇನ್ನಷ್ಟು ರಿಯಾಯಿತಿ ದರದ ಪಾಸ್ ನೀಡಬೇಕೆಂದು ಎಸ್‌ಡಿಪಿಐ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಒಂದು ವೇಳೆ ಬೇಡಿಗೆ ಈಡೇರಿಸದಿದ್ದಲ್ಲಿ ಎಸ್‌ಡಿಪಿಐ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಶೇಕ್ ಸಿರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.