ತನಿಖಾಧಿಕಾರಿ ಬದಲಾವಣೆಗೆ ಆಗ್ರಹ
ಚಿತ್ತಾಪುರ: ಜೇವರ್ಗಿ ತಾಲೂಕಿನ ಮಾಣಶಿವಣಗಿ ಗ್ರಾಮದಲ್ಲಿ ದಲಿತ ಯುವಕ ಚಂದ್ರಕಾಂತ ಯಲ್ಲಪ್ಪ ಚೌಡಕಿ ಕೊಲೆ ತನಿಖೆಯನ್ನು ಸರ್ಕಾರ ಎಎಸ್‌ಪಿ ಸಂತೋಷ ಬಾಬುಯವರಿಗೆ ವಹಿಸಿದ್ದು, ಅವರು ತನಿಖೆಯನ್ನು ನಡೆಸದೇ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ತನಿಖಾಧಿಕಾರಿಯನ್ನು ಕೂಡಲೇ ಬದಲಾಯಿಸಬೇಕೆಂದು ಬಹುಜನ ಜಾಗೃತಿ ವೇದಿಕೆ ತಾಲುಕು ಅಧ್ಯಕ್ಷ ಸುಭಾಷ ಕಟಕೆ, ಕಾರ್ಯದರ್ಶಿ ಸೂರ್ಯಕಾಂತ ಬೋಮನಳ್ಳಿ ಒತ್ತಾಯಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಎಎಸ್‌ಪಿ ಸಂತೋಷ ಬಾಬು ಅವರನ್ನು ನೇಮಿಸಲಾಗಿದ್ದು, ಅವರು ಅರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವ ಬದಲು ಅವರ ಜತೆ ಶಾಮಿಲಾಗಿ ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಅಧಿಕಾರಿಗಳು ತನಿಖೆ ನಡೆಸಿದರೆ ಅಪರಾಧಿಗಳಿಗೆ ಶಿಕ್ಷೆಯಾಗುವುದಿಲ್ಲ. ಅದಕ್ಕಾಗಿ ಈ ಅಧಿಕಾರಿಯನ್ನು ಬದಲಾಯಿಸಿ ನೊಂದ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಅಗ್ರಹಿಸಿದ್ದಾರೆ.
ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ರಕ್ಷಣೆ ಒದಗಿಸಿ, ಅರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ನೀತಿ ಅನುಸರಿಸಿದಲ್ಲಿ ಜಿಲ್ಲಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸುಭಾಷ ಕಟಕೆ ಮತ್ತು ಸೂರ್ಯಕಾಂತ ಬೊಮ್ಮನಳ್ಳಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

