ಗುಲ್ಬರ್ಗಾ

ಪೊಲೀಸರ ಮಕ್ಕಳಿಗೆ ಪ್ರೋತ್ಸಾಹ ಅವಶ್ಯ: ಎಸ್ಪಿ

Published On :

ಕನ್ನಡಪ್ರಭ ವಾರ್ತೆ , ಸಿಂಧನೂರು , ಮೇ 21
ದಿನದ 24 ಗಂಟೆಗಳ ಕಾಲ ಕರ್ತವ್ಯದಲ್ಲಿ ನಿರತರಾಗುವ ಪೊಲೀಸರು ಮಕ್ಕಳ ಮತ್ತು ಕುಟುಂಬದ ಕಡೆ ಗಮನ ನೀಡಲು ಆಗುವುದಿಲ್ಲ. ಪೊಲೀಸರ ಮಕ್ಕಳು ಸ್ವಇಚ್ಛೆಯಿಂದ ಓದಿ ಉತ್ತಮ ಅಂಕ ಗಳಿಸಬೇಕಾಗುತ್ತದೆ.   
  ಉತ್ತಮ ಅಂಕಗಳಿಸಿ ತೇರ್ಗಡೆಯಾದ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅವಶ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ ಹೇಳಿದರು.
  ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಪೊಲೀಸ್ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಮಕ್ಕಳು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ದ್ವಿತೀಯ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
  ಪೊಲೀಸರ ಮಕ್ಕಳು ಇದೇ ರೀತಿ ಆರೋಗ್ಯಕರ ಸ್ಪರ್ಧೆಯಲ್ಲಿ ಮುನ್ನಡೆದು ತಂದೆ- ತಾಯಿಯ ಕೀರ್ತಿ ತರಬೇಕು. ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಲು ಮುಂದಾಗಿರುವುದು ಪೊಲೀಸ್ ಅಧಿಕಾರಿಗಳ ಕಾರ್ಯ ಉತ್ತಮವಾದುದು. ಜೊತೆಗೆ ತಮ್ಮ ಇಲಾಖೆಗೆ ಅರ್ಜಿ ಹಾಕಿದರೆ ಪ್ರೋತ್ಸಾಹದಾಯಕವಾಗಿ ಪ್ರತಿ ವಿದ್ಯಾರ್ಥಿಗಳಿಗೆ 1500 ಸಹಾಯಧನ ನೀಡಲಾಗುವುದು ಎಂದು ಹೇಳಿದರು.
  ಈ ವೇಳೆ ಡಿವೈಎಸ್ಪಿ ಸೂರ್ಯವಂಶಿ, ಸಿಪಿಐ ಶೇಖರಪ್ಪ, ಪಿಎಸ್‌ಐಗಳಾದ ಬಾಳನಗೌಡ, ಎಸ್.ಎಂ.ಪಾಟೀಲ್ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.