ನಗರೋತ್ಥಾನ ಯೋಜನೆಗೆ ಜೂ. 10ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ
ಗುಲ್ಬರ್ಗ: ಮೂರನೇ ಹಂತದ ನಗರೋತ್ಥಾನ ಯೋಜನೆಯ ಅನುದಾನಕ್ಕಾಗಿ ಜೂ.10ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಎಲ್ಲ ಮಹಾನಗರ ಪಾಲಿಕೆಗಳಿಗೆ ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ ಸೂಚಿಸಿದ್ದಾರೆ. ರಾಜ್ಯದಲ್ಲಿರುವಮಹಾನಗರ ಪಾಲಿಕೆಗಳಿಗೆ ಮುಖ್ಯಮಂತ್ರಿ ನಗರೋತ್ಥಾನ ಯೋಜನೆ 3ನೇ ಹಂತದಲ್ಲಿ ತಲಾ 100 ಕೋಟಿ ಅಭಿವೃದ್ಧಿ ಅನುದಾನ ನೀಡುವ ಯೋಜನೆ ಸಿದ್ಧವಾಗಿದೆ. ಇದಕ್ಕಾಗಿ ಬಜೆಟ್ನಲ್ಲಿ 1000 ಕೋಟಿ ಮೀಸಲಿಡಲಾಗಿದೆ. ಯೋಜನೆಯಲ್ಲಿ ಪಾಲಿಕೆಗಳಿಗೆ ನೀಡುವ ಅನುದಾನ 3 ಹಂತಗಳಲ್ಲಿ ವಿಂಗಡಿಸಲಾಗಿದೆ. 2014- 15 ರ ಮೊದಲ ವರ್ಷ 20 ಕೋಟಿ, 2015-16 2ನೇ ವರ್ಷ ಮತ್ತು 2015- 16ರ ಮೂರನೇ ವರ್ಷ ತಲಾ 40 ಕೋಟಿ ಬಿಡುಗಡೆ ಮಾಡಲಾಗುತ್ತದೆ. ಈ ಬಿಡುಗಡೆ ಕೋಷ್ಟಕಕ್ಕೆ ತಕ್ಕಂತೆ ಪಾಲಿಕೆಗಳು ಜೂ.10 ರ ಒಳಗಾಗಿ ತಮ್ಮ ವ್ಯಾಪ್ತಿಯಲ್ಲಿನ ಪ್ರಗತಿ ಯೋಜನೆಗಳನ್ನು ಒಳಗೊಂಡ ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದರು.
ವೈಜ್ಞಾನಿಕ ಕಸ ವಿಲೇವಾರಿಗೆ ಸೂಚನೆ: ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿಗೆ ಆದೇಶ ನೀಡಲಾಗಿದ್ದು, ರಾಜ್ಯದಲ್ಲಿರುವ ಎಲ್ಲ 211 ನಗರ ಮತ್ತು ಸ್ಥಳೀಯ ಸಂಸ್ಥೆಗಳು ಈ ಆದೇಶದಂತೆ 5 ರಿಂದ 10 ಎಕರೆ ಭೂಮಿ ಕಸ ವಿಲೇವಾರಿಗೆ ಖರೀದಿಸಬೇಕು. ಜನರ ಮನೆಯಿಂದ ಕಸ ಸಂಗ್ರಹಿಸಿ ನೇರವಾಗಿ ಈ ಪ್ರದೇಶಕ್ಕೆ ತಂದು ವಿಲೇವಾರಿ ಮಾಡಬೇಕು ಎಂದರು.
ಕಲುಷಿತ ನೀರು: ಮತ್ತೊಬ್ಬ ಸಾವು
ಹೊನ್ನಾಳಿ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯರಲಬನ್ನಿಕೋಡು ಗ್ರಾಮದಲ್ಲಿ ಕಲು ಷಿತ ನೀರು ಸೇವಿಸಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ವಾಂತಿ, ಭೇದಿಯಿಂದ ಬಳಲುತ್ತಿದ್ದ ಪೂಜಾರ್ ಕೊಟ್ರಪ್ಪ (50) ಅವರನ್ನು ಶುಕ್ರವಾರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮಂಗಳವಾರವಷ್ಟೆ ಕಲುಷಿತ ನೀರು ಕುಡಿದು ಬಾಲಕ ಶರತ್(5) ಮೃತಪಟ್ಟಿದ್ದ. ಈ ವೇಳೆ 30 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

