ಗುಲ್ಬರ್ಗಾ

ಜೂ.5ರಂದು ರಾಜ್ಯಾದ್ಯಂತ ಪ್ರತಿಭಟನೆ

Published On :

ಗುಲ್ಬರ್ಗ: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ, ಎಡಿಜಿಪಿ ಡಾ. ರವೀಂದ್ರನಾಥ ಪ್ರಕರಣ ಕುರಿತು ನ್ಯಾಯಾಂಗ ಹಾಗೂ ಸಿಬಿಐ ತನಿಖೆಗೆ ಒಳಪಡಿಸಿ ಉನ್ನತ ಅಧಿಕಾರಿಗೆ ರಕ್ಷಣೆ ನೀಡಬೇಕು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜೂ. 5ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ ತಿಳಿಸಿದರು.
ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಪೋಲಿಸ್ ಕಮಿಷನರ್ ಹುದ್ದೆಯಿಂದ ರಾಘವೇಂದ್ರ ಔರಾದಕರ್ ಹಾಗೂ ಡಿಜಿಪಿ ರವಿಕಾಂತಗೌಡ ಅವರನ್ನು ವರ್ಗಾವಣೆ ಮಾಡಬೇಕೆಂದರು. ಡಾ.ರವೀಂದ್ರನಾಥ ನೀಡಿರುವ ರಾಜೀನಾಮೆಯನ್ನು ಸರ್ಕಾರ ಒಪ್ಪಿಕೊಳ್ಳದೆ ದಲಿತ ಉನ್ನತ ಅಧಿಕಾರಿಯನ್ನು ಉದ್ದೇಶ ಪೂರ್ವಕವಾಗಿ ಹಿಂಸೆ ನೀಡಲಾಗುತ್ತಿದ್ದು ಈ ಕುರಿತು ಕೇಸನ್ನು ದಾಖಲಿಸಿ ದಕ್ಷ, ಪ್ರಾಮಾಣಿಕ ನಿಷ್ಠಾವಂತ ದಲಿತ ಅಧಿಕಾರಿಗೆ ಸೂಕ್ತ ರಕ್ಷಣೆ ನೀಡಬೇಕು. ಈ ವಿಷಯದ ಬಗ್ಗೆ ಗೃಹ ಸಚಿವರು, ಮುಖ್ಯಮಂತ್ರಿಗಳು ಗಂಭಿರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
ಘಟನೆ ನಡೆದು 11 ಗಂಟೆ ತಡವಾಗಿ ಯುವತಿಯು ದೂರು ನೀಡಿದ್ದಾಳೆ. ಅಪರಿಚಿತ ಶ್ರೀಧರನು ಅಧಿಕಾರಿಯ ಬಳಿ ಇದ್ದ ಮೊಬೈಲ್, ಪರ್ಸ್ ಕಸಿದುಕೊಂಡಿರುವುದು, ತಾವು ಎಡಿಜಿಪಿ ಡಾ.ರವಿಂದ್ರನಾಥ ಪೊಲೀಸ್ ಅಧಿಕಾರಿ  ಎಂದು ಹೇಳಿದರೂ ಅವರ ಜೊತೆ ಅವಮಾನಕರವಾಗಿ ನಡೆದುಕೊಂಡಿದ್ದಾರೆ. ಅವರ ಹೇಳಿಕೆ ದಾಖಲು ಮಾಡಿಕೊಳ್ಳದೆ ಇರುವುದರಿಂದ ಇದೊಂದು ಪೂರ್ವ ಯೋಜಿತ ಷಡ್ಯಂತ್ರವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದಕರ ಗುಲ್ಬರ್ಗ ಜಿಲ್ಲಾ ಎಸ್‌ಪಿ ಯಾಗಿದ್ದಾಗ ಮಾಡಿದ ತಪ್ಪುಗಳನ್ನು ಡಾ.ರವೀಂದ್ರನಾಥ ಅಧಿಕಾರಿ ಮೇಲಾಧಿಕಾರಿಗಳಿಗೆ ತಿಳಿಸಿದ್ದರಿಂದ ಉದ್ದೇಶ ಪೂರ್ವಕವಾಗಿ ಔರಾದಕರ್ ಸೇಡು ತೀರಿಸಿಕೊಳ್ಳುವ ಹಿನ್ನಲೆಯಲ್ಲಿ ಷಡ್ಯಂತ್ರ ರೂಪಿಸಿ ಚಾರಿತ್ರೆಯ ವಧೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.