ಮಾರ್ಗಸೂಚಿ ಪ್ರಕಟ
ಯಾದಗಿರಿ: 2014-15ನೇ ಸಾಲಿನ ಶಿಕ್ಷಕರ ವರ್ಗಾವಣಾ ಮಾರ್ಗಸೂಚಿಗಳನ್ನು, ಇಲಾಖೆಯ ವೆಬ್ಸೈಟ್ ಢಿಢಿಢಿ. ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ರಲ್ಲಿ ಮೇ 24ರಂದು ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿಯೂ ಪ್ರಕಟಿಸಲಾಗಿದೆ.
ಈ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಂತೆ, ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಅದರ ಪ್ರತಿಯನ್ನು ಖುದ್ದಾಗಿ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ಮತ್ತು ಗ್ರೂಪ್-ಬಿ ಅಧಿಕಾರಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಅದರ ಪ್ರತಿಯನ್ನು ಸಂಬಂಧಿಸಿದ ಉಪನಿರ್ದೇಶಕರಿಗೆ ಖುದ್ದಾಗಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಿ.ಎಂ. ಹೊಸಮನಿ ಸೂಚಿಸಿದ್ದಾರೆ.
ಆಯ್ಕೆ ಪಟ್ಟಿ ಪ್ರಕಟ
ಯಾದಗಿರಿ: ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು ಅರಿವು ಮೂಡಿಸಲು ಜೂ. 3ರಂದು ಶಹಾಪುರ, ಸುರಪುರ ಹಾಗೂ ಯಾದಗಿರಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕಾ ನೋಡಲ್ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಗಾರದ ದಿನ ಟಿಇಟಿ ಪರೀಕ್ಷಾರ್ಥಿಗಳು ಹಾಜರಾಗುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಪ್ರಾಂಶುಪಾಲರು ತಿಳಿಸಿದ್ದಾರೆ.
ವೃದ್ಧ ಸಾವು
ಕೆಂಭಾವಿ: ಪಟ್ಟಣದಲ್ಲಿ ಗುರುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೊಬ್ಬ ಮೃತಪಟ್ಟಿದ್ದಾನೆ. ಸೋಫಿಸಾಬ (65) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

