ಹಾಸನ

ಎಸ್ಸೆಸ್ಸೆಲ್ಸಿ, ಪಿಯುಸಿ ಫೇಲಾದ ವಿದ್ಯಾರ್ಥಿಗೂ ಪ್ರವೇಶ

Published On :

ಕ.ಪ್ರ.ವಾರ್ತೆ  ಆಲೂರು  ಏ.2
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫೇಲಾದ ವಿದ್ಯಾರ್ಥಿಗಗಳಿಗೆ ದೂರ ಶಿಕ್ಷಣದ ಮೂಲಕ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನೇರ ಪ್ರವೇಶ ಪಡೆಯಲು ತಾಲೂಕಿನ ಕಣತೂರು ಗ್ರಾಮದಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ವಿಧ್ಯಾಸಂಸ್ಥೆ (ರಿ), ಕಿರಣ್ ಕಾನ್ವೆಂಟ್ನಲ್ಲಿ ನೇಮಕಾತಿ ಆರಂಭವಾಗಿದೆ ಎಂದು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಚ್.ಜಿ.ಆನಂದ್ ತಿಳಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಮಂಜುನಾಥ ಸ್ವಾಮಿ ವಿದ್ಯಾಸಂಸ್ಥೆ (ರಿ) ಕಿರಣ್ ಕಾನ್ವೆಂಟ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ(ರಿ) ದಾವಣಗೆರೆ ಇವರ ಆಶ್ರಯದಲ್ಲಿ  ಜಿಲ್ಲೆಯಲ್ಲಿಯೇ ಏಕೈಕ ಅಂಗೀಕೃತ ಅಧ್ಯಯನ ಕೇಂದ್ರ ಇದಾಗಿದ್ದು ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.
 ಎಸ್ಸೆಸ್ಸೆಲ್ಸಿ,  ದ್ವಿತೀಯ ಪಿಯು (ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಷಯಗಳಿಗೆ) ದೂರ ಶಿಕ್ಷಣದ ಮೂಲಕ ನೇರ ಪ್ರವೇಶ ಪಡೆಯಬಹುದು. ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಕಾರ್ಯದರ್ಶಿ ಕಿರಣ್ ಕಾನ್ವೆಂಟ್ ಇವರನ್ನು ಸಂಪರ್ಕಿಸಬೇಕಾಗಿ ತಿಳಿಸಿದರು. ಸಂಪರ್ಕಿಸಬೇಕಾದ ದೂ.ಸಂಖ್ಯೆ. 08170-317316, 9964417623, 8904115974, 9964300651.
ಆಲೂರು ಲಯನ್ಸ್ ಕ್ಲಬ್ ಅಧ್ಯಕ್ಷ ನೀಲೇಶ್, ಕಾರ್ಯದರ್ಶಿ ರೇಣುಕಾ ಪ್ರಸಾದ್, ಅಧ್ಯಯನ ಕೇಂದ್ರದ ಸಂಯೋಜಕ ಮಂಜುಭಾರ್ಗವ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.