ಹಾಸನ

ಸಣ್ಣಸ್ವಾಮಿಗೆ ಟಿಕೆಟ್ ನೀಡಲು ಆಗ್ರಹ

Published On :

ಸಕಲೇಶಪುರ: ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಸಿ. ಸಣ್ಣಸ್ವಾಮಿಯವರಿಗೆ ಈ ಬಾರಿ ಟಿಕೆಟ್ ನೀಡಬೇಕೆಂದು ತಾಲೂಕು ಪಂಚಾಯ್ತಿ ಸದಸ್ಯ ಕೊಮಾರಯ್ಯ ಸೇರಿದಂತೆ ಹಲವರು ಮುಖಂಡರು ಒತ್ತಾಯಿಸಿದ್ದಾರೆ.   ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲು ಕ್ಷೇತ್ರಕ್ಕೆ ಡಿ.ಮಲ್ಲೇಶ್ ಹೆಸರು ವರಿಷ್ಠರು ಸೂಚಿಸಿದ್ದಾರೆ ಎಂಬ ವದಂತಿ ಹಬ್ಬಿದೆ. ಆದರೆ, ಸ್ಥಳೀಯರಿಗೇ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.  ಕಳೆದ ಚುನಾವಣೆಯಲ್ಲಿ ಪರಾಭವಗೂಂಡ ನಂತರ ಕ್ಷೇತ್ರದಲ್ಲಿ ಪಕ್ಷದ ನಿಷ್ಠಾವಂತೆ ಕಾರ್ಯಕರ್ತನಾಗಿ ಬೂತ್ ಮಟ್ಟದಿಂದಲೇ ಸಮಿತಿಗಳನ್ನು ರಚಿಸಿ ಕಾಂಗ್ರೆಸ್ ಅನ್ನು ಉತ್ತಮ ಸ್ಥಿತಿಗೆ ತಂದಿದ್ದಾರೆ ಹಾಗೂ ಈ ಚುನಾವಣೆಯಲ್ಲಿ ಡಿಸಿ ಸಣ್ಣಸ್ವಾಮಿಗೆ ಟಿಕೆಟ್ ನೀಡಿದರೆ ಪಕ್ಷ ಗೆಲ್ಲುವುದು ಖಚಿತ ಎಂದರು. ಆದರೆ, ಕ್ಷೇತ್ರದ ಬಗ್ಗೆ ಯಾವುದೇ ಅರಿವಿಲ್ಲದ ಡಿ.ಮಲ್ಲೇಶ್ ಜೆಡಿಎಸ್ನಲ್ಲಿದ್ದು, ಬೇಲೂರು ಕ್ಷೇತ್ರದಿಂದ ಎರಡು ಬಾರಿ ಹಾಗೂ ಜಿಪಂ ಸ್ಥಾನವನ್ನೂ ಸಾಧ್ಯವಾಗಿಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರಿ ಇದೀಗ ಕಾಂಗ್ರೆಸ್ಗೆ ವಲಸೆ ಬಂದಿರುವ ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ, ಪಕ್ಷ ಸಂಪೂರ್ಣ ನೆಲ ಕಚ್ಚಲಿದೆ ಎಂದರು.  ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ನ ಸಂಜಯ್, ಹೇಮಂತ್, ಅಬ್ದುಲ್, ಬಿ.ಬಿ. ಸುಂದರಮ್ಮ, ಕೌಸಲ್ಯ ಲಕ್ಷ್ಮಣ್ ಗೌಡ, ಗಿರೀಶ್, ತುಳಸಿ ಪ್ರಸಾದ್, ನಾಗರಾಜ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.