ಇಂದು ಅರಸೀಕೆರೆಯಲ್ಲಿ ಕೆಜೆಪಿ ಸಮಾವೇಶ
ಅರಸೀಕೆರೆ: ಪಟ್ಟಣದ ಬಸವರಾಜೇಂದ್ರ ಪ್ರೌಢಶಾಲಾ ಆವರಣದಲ್ಲಿ ಏ.4 ಗುರುವಾರ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಜನತಾ ಪಕ್ಷದ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಪುರಸಭೆ ಸದಸ್ಯ ಶೈಲೇಂದ್ರಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶಕ್ಕೆ ಸುಮಾರು 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಪಟ್ಟಣದ ಜೇನುಕಲ್ ಕ್ರೀಡಾಂಗಣದಿಂದ ಬಸವರಾಜೇಂದ್ರ ಪ್ರೌಢಶಾಲಾ ಅವರಣದವರೆಗೆ ಬೈಕ್ ರ್ಯಾಲಿ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಗುವುದು ಎಂದು ತಿಳಿಸಿದರು. ಕ್ಷೇತ್ರದಲ್ಲಿ ಕೆಜೆಪಿಯನ್ನು ಗ್ರಾಮೀಣ ಮಟ್ಟದಿಂದ ಸಮರ್ಥವಾಗಿ ಬೆಳೆಸುವ ಮೂಲಕ ಕ್ಷೇತ್ರದ ಅಭ್ಯರ್ಥಿ ಡಾ.ಲೋಕೇಶ್ ಕೈಬಲಪಡಿಸುವ ಉದ್ದೇಶದಿಂದ ಸಮಾವೇಶ ಏರ್ಪಡಿಸಲಾಗಿದೆ ಎಂದರು. ಸಮಾವೇಶದಲ್ಲಿ ಯಡಿಯೂರಪ್ಪ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಜಬ್ಬಾರ್ಖಾನ್ ಹೊನ್ನಳ್ಳಿ, ಕೆಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಲಕ್ಷ್ಮೀನಾರಾಯಣ್, ಕೆಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮುಕುಡಪ್ಪ ಹಾಗೂ ಮಾಜಿ ಶಾಸಕ ಎ.ಎಸ್.ಬಸವರಾಜ್ ಪಾಲ್ಗೊಳ್ಳಲಿದ್ದಾರೆ. ಗ್ರಾಮಾಂತರ ಹಾಗೂ ನಗರ ಪ್ರದೇಶದ ಯಡಿಯೂರಪ್ಪನವರ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಮತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

