ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾಸನ: ಕೃಷಿ ವಲಯದ ನಾನಾ ವಿಭಾಗಗಳಲ್ಲಿ ಅಮೂಲ್ಯ ಸಾಧನೆ, ಅನ್ವೇಷಣೆ ಮೂಲಕ ರೈತ ಸಮು ದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ರಾಜ್ಯದ ಪರಿಣಿತ ಕೃಷಿಕರಿಂದ 2012-13 ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿಗಳು ಮತ್ತು ಸಾವಯವ ಕೃಷಿ, ಯಂತ್ರೋಪಕರಣಗಳ ಅಭಿವೃದ್ಧಿ ಹಾಗೂ ನೀರಿನ ಸಮರ್ಥ ಬಳಕೆ - ಈ ನಾಲ್ಕು ವಿಭಾಗ ಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರತಿ ವಿಭಾಗದಲ್ಲಿ ತಲಾ ಲಕ್ಷ ರೂಪಾಯಿ ಪ್ರಥಮ, 50 ಸಾವಿರ ರೂಪಾಯಿ ದ್ವಿತೀಯ ಹಾಗೂ 25 ಸಾವಿರ ರೂಪಾಯಿಗಳ ತೃತೀಯ ಬಹುಮಾನವನ್ನು ಪ್ರಶಸ್ತಿ ಪತ್ರ ದೊಂದಿಗೆ ನೀಡಲಾಗುತ್ತದೆ.
ಆಸಕ್ತ ಕೃಷಿಕರು ತಮ್ಮ ನಾಮ ನಿರ್ದೇಶನವನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲೆಗಳ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ಕೃಷಿ ವಿಶ್ವವಿದ್ಯಾನಿಲಯ ತಜ್ಞರ ಷರಾ ಶಿಫಾರಸ್ಸಿನೊಂದಿಗೆ ಕೃಷಿ ಆಯುಕ್ತರು, ಶೇಷಾದ್ರಿ ರಸ್ತೆ, ಬೆಂಗಳೂರು- 560001 ಇವರಿಗೆ ಮೇ 31 ರೊಳಗೆ ತಲುಪುವಂತೆ ಕಳುಹಿಸುವಂತೆ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ನಮೂನೆಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.
ಕವಿ ಸಮ್ಮೇಳನ
ಹಾಸನ: ಯುವ ಲೇಖಕರ ಬಳಗ ಮನೆ ಮನೆ ಕವಿಗೋಷ್ಠಿ ಹಾಗೂ ಹಳ್ಳಿ ಸಾಹಿತ್ಯ ಪ್ರಕಾಶನ ಹಾಸನ ಸಂಯುಕ್ತಾಶ್ರಯದಲ್ಲಿ ಚಿನ್ನೇನಹಳ್ಳಿ ಸ್ವಾಮಿಯವರ “@M}ÚÃ’ ಕಾದಂಬರಿ ಬಿಡುಗಡೆ ಹಾಗೂ ರಾಜ್ಯಮಟ್ಟದ ಕವಿ ಸಮ್ಮೇಳನ ಚಿನ್ನೇನಹಳ್ಳಿಯಲ್ಲಿ ಏರ್ಪಡಿಸಲಾಗಿದೆ. ಸಾಹಿತಿ ಹಾಡ್ಲಹಳ್ಳಿ ನಾಗರಾಜು ಉದ್ಘಾಟಿಸುವರು. ಹಿರಿಯ ಸಾಹಿತಿ ಚಿಂತಕ ಶೂದ್ರ ಶ್ರೀನಿವಾಸ್ ಕೃತಿ ಬಿಡುಗಡೆ ಮಾಡುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

