ಅಕ್ರಮ ಮದ್ಯ ಮಾರಾಟ: ಬಂಧನ
ಕನ್ನಡಪ್ರಭ ವಾರ್ತೆ ಹಾಸನ ಏ 3
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಶಾಂತಿಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ತಾಲೂಕಿನ ಶಾಂತಿಗ್ರಾಮ ಹೋಬಳಿ ತ್ಯಾವಿಹಳ್ಳಿ ಗೇಟಟ್ಬಳಿ ಬಿ.ಎಂ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಈ ಸಂಬಂಧ ಧನಪಾಲ (25) ಎಂಬಾತನನ್ನು ಬಂಧಿಸಿ, ಮದ್ಯ ಮಾರಾಟಕ್ಕಿಟ್ಟಿದ್ದ 1039 ರು. ಬೆಲೆಯ 90 ಎಂಎಲ್ ಬ್ರಾಂದಿ 40 ಪ್ಯಾಕೇಟ್ ಮತ್ತು ಕೊಡೆಸ್ ರಮ್ 9 ಪ್ಲಾಸ್ಟಿಕ್ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.
ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಿಣಿ ನಾಪತ್ತೆ: ಹಾಸನ: ತಾಲೂಕಿನ ಕಟ್ಟಾಯ ಹೋಬಳಿ, ಗಾಣಿಗರಕೊಪ್ಪಲು ಗ್ರಾಮದ ಲಕ್ಷ್ಮೇಗೌಡ ಎಂಬುವರ ಪತ್ನಿ ರತ್ನ(35) ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಚಹರೆ 5.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಮತ್ತು ರವಿಕೆ ಧರಸಿದ್ದರು. ಪತಿ ಲಕ್ಷ್ಮೇಗೌಡ ಗೊರೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

