ಟಿಕೆಟ್ಗೆ ಆಗ್ರಹಿಸಿ ಬಿಜೆಪಿ ಮುಖಂಡರ ಬಳಿ ನಿಯೋಗ
ಕ.ಪ್ರ. ವಾರ್ತೆ ಅರಸೀಕೆರೆ ಏ.3
ಈ ಬಾರಿ ತಮಗೆ ಬಿಜೆಪಿಯಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಿಯೋಗ ಕರೆದೊಯ್ದು ವರಿಷ್ಠರಲ್ಲಿ ಮನವಿ ಮಾಡುವುದಾಗಿ ತಾಲೂಕು ಪಂಚಾಯ್ತಿ ಸದಸ್ಯ ಬಿ.ಆರ್. ಜಯಣ್ಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ಐದಾರು ದಶಕಗಳಿಂದ ಹಿಂದುಳಿದ ವರ್ಗದವರನ್ನು ಓಟ್ ಬ್ಯಾಂಕ್ ಆಗಿ ಮಾಡಿಕೆಕ್ಡಿವೆ. ತಾವು 40 ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿ ದುಡಿಯುತ್ತಿದ್ದು ಕಾರ್ಯಕರ್ತರ ನಾಡಿಮಿಡಿತ ಬಲ್ಲವನಾಗಿದ್ದು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲು ಪ್ರಬಲ ಆಕಾಂಕ್ಷಿಯಾಗಿರುವುದಾಗಿ ಹೇಳಿದ್ದಾರೆ.
ತಾಲೂಕಿನಲ್ಲಿ ವೀರಶೈವ ಜನಾಂಗ ಹೊರತುಪಡಿಸಿದರೆ 2ನೇ ಹಾಗೂ ಹೆಚ್ಚು ಮತದಾರರನ್ನು ಹೊಂದಿರುವ ಕುರುಬ ಸಮಾಜಕ್ಕೆ ಯಾವುದೇ ರಾಜಕೀಯ ಪಕ್ಷಗಳು ಇದುವರೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಲ್ಲ. ಆದ್ದರಿಂದ ಈ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆ ಹೊಂದಿದ್ದೇನೆ.
ಈ ಸಂಬಂಧ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅನಂತಕುಮಾರ್, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಮನವರಿಕೆ ಮಾಡಿಕೊಡಲಾಗುವುದೆಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

