ಶರಣ ಸಂಸ್ಕೃತಿ ಯಾತ್ರೆಗೆ ಅದ್ಧೂರಿ ಸ್ವಾಗತ
ಸಕಲೇಶಪುರ: ಬಸವಜಯಂತಿ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಶರಣ ಸಂಸ್ಕೃತಿ ಮಹಾಯಾತ್ರೆ ಇತ್ತೀಚೆಗೆ ಪಟ್ಟಣಕ್ಕೆ ಆಗಮಿಸಿದಾಗ ಅದ್ಧೂರಿ ಸ್ವಾಗತ ನೀಡಲಾಯಿತು. ಬಸವಜಯಂತಿ ಆಚರಣೆಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸಲಿರುವ ಈ ಯಾತ್ರೆಯನ್ನು ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನ ಸಮೀಪ ಮಲೆನಾಡು ವೀರಶೈವ ಸಮಾಜದ ಮುಖಂಡರು ಸ್ವಾಗತಿಸಿ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪಕ್ಕೆ ಕರೆತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಾತ್ರೆಯ ನೇತೃತ್ವ ವಹಿಸಿರುವ ಅರವಿಂದ್ ಜತ್ತಿ, ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪ್ರಚಾರ ಪಡಿಸುವುದು ಈ ಯಾತ್ರೆಯ ಮುಖ್ಯ ಉದ್ದೇಶವಾಗಿದ್ದು ಆಧುನೀಕ ಸಮಾಜದಲ್ಲಿ ಬಸವಣ್ಣನವರ ವಿಚಾರ ಧಾರೆಗಳು ಅತ್ಯವಶ್ಯಕ ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

